
ಧಾರವಾಡ, 19 ಜುಲೈ (ಹಿ.ಸ.):
ಆ್ಯಂಕರ್:
ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಪದ್ಮಭೂಷಣ, ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ಅವರ 35ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜುಲೈ 21, 2026 ರಂದು ಬೆಳಗ್ಗೆ 9:30 ಗಂಟೆಗೆ ಧಾರವಾಡದ ಹೊಸಯಲ್ಲಾಪುರದಲ್ಲಿರುವ ಪಂ. ಬಸವರಾಜ ರಾಜಗುರು ಅವರ ಸಮಾಧಿ ಸ್ಥಳದಲ್ಲಿ ಪೂಜಾ ಕಾರ್ಯಕ್ರಮ ಹಾಗೂ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ, ಭಾರತಿದೇವಿ ರಾಜಗುರು, ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‍ನ ಅಧ್ಯಕ್ಷರಾದ ಪಂ. ಎಂ. ವೆಂಕಟೇಶಕುಮಾರ, ಟ್ರಸ್ಟ್‍ನ ಅಧ್ಯಕ್ಷರಾದ ಪಂ. ಕೈವಲ್ಯಕುಮಾರ ಗುರವ, ಟ್ರಸ್ಟ್ ಸಮಿತಿಯ ಸದಸ್ಯರುಗಳು, ಗಣ್ಯರು, ಕಲಾವಿದರು ಹಾಗೂ ಪಂ. ಬಸವರಾಜ ರಾಜಗುರು ಅವರ ಶಿಷ್ಯರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಅನುರಾಗ ಸಂಗೀತ ಬಳಗ ಅವರಿಂದ ‘ಸಂಗೀತ ನಮನ’ ಕಾರ್ಯಕ್ರಮ ಜರುಗಲಿದೆ ಎಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.