ಚೆನ್ನಮ್ಮ ನಿಧನ: ಅಂತಿಮ ನಮನ ಸಲ್ಲಿಸಿದ ಡಾ. ಜಿ. ಪರಮೇಶ್ವರ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಅಂತಿಮ ನಮನ ಸಲ್ಲಿಸಿ, ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತ
DCm


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್:

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರದ ದರ್ಶನ ಪಡೆದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಅಂತಿಮ ನಮನ ಸಲ್ಲಿಸಿ, ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಅವರು, ಚೆನ್ನಮ್ಮನವರ ನಿಧನದಿಂದ ಅವರ ಕುಟುಂಬದವರಷ್ಟೇ ನಾನೂ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande