ರಾಜ್ಯದಲ್ಲಿ ಬರ ನಿರ್ವಹಣೆಗೆ ಸರ್ಕಾರ ಸಜ್ಜು: ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನ
Dcm


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್:ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ 'ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆ ಹಾಗೂ ಉದ್ಯೋಗ' ಕುರಿತ ವಿಡಿಯೋ ಸಂವಾದದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.

ಈ ವೇಳೆ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಪರಮೇಶ್ವರ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗದ ವ್ಯವಸ್ಥೆಗೆ ಆದ್ಯತೆ ನೀಡುವಂತೆ ನಿರ್ದೇಶಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande