ಮಂಗಲ್ ಪಾಂಡೆ ಜಯಂತಿ:ಡಿ.ಕೆ. ಶಿವಕುಮಾರ್ ನಮನ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್: ಬ್ರಿಟಿಷರ ವಿರುದ್ಧ ಬಂಡೆದ್ದು, ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಕ್ರಾಂತಿವೀರ ಮಂಗಲ್‌ ಪಾಂಡೆ ಅವರ ಸಾಹಸ ಮತ್ತು ಬಲಿದಾನವು ಕೋಟ್ಯಂತರ ಭಾರತೀಯರಲ್ಲಿ ಸ್ವಾತಂತ್ರ್ಯದ ಕಿಡಿಯನ್ನು ಹೊತ್ತಿಸಿತು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ
CM post


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್:

ಬ್ರಿಟಿಷರ ವಿರುದ್ಧ ಬಂಡೆದ್ದು, ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಕ್ರಾಂತಿವೀರ ಮಂಗಲ್‌ ಪಾಂಡೆ ಅವರ ಸಾಹಸ ಮತ್ತು ಬಲಿದಾನವು ಕೋಟ್ಯಂತರ ಭಾರತೀಯರಲ್ಲಿ ಸ್ವಾತಂತ್ರ್ಯದ ಕಿಡಿಯನ್ನು ಹೊತ್ತಿಸಿತು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಗಲ್‌ ಪಾಂಡೆ ಜಯಂತಿಯ ಅಂಗವಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಬ್ರಿಟಿಷರ ಎದೆ ನಡುಗಿಸಿದ ಅವರ ಕ್ರಾಂತಿಯ ಹೆಜ್ಜೆ ಇಡೀ ದೇಶವನ್ನು ಬ್ರಿಟಿಷ್ ಆಡಳಿತದ ವಿರುದ್ಧ ಒಗ್ಗೂಡಿಸಿ ಹೋರಾಟಕ್ಕೆ ಪ್ರೇರೇಪಿಸಿತು ಎಂದು ತಿಳಿಸಿದ್ದಾರೆ.

ಭಾರತ ಮಾತೆಯ ಹೆಮ್ಮೆಯ ಪುತ್ರ ಮಂಗಲ್‌ ಪಾಂಡೆ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು ಎಂದು ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande