ರಾಜ್ಯಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ ಸಾಧ್ಯತೆ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಹಾಗ
ರಾಜ್ಯಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ ಸಾಧ್ಯತೆ


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಹಾಗೂ ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande