ತುಮಕೂರು: ಬರ ಪರಿಸ್ಥಿತಿ ನಿರ್ವಹಣೆ ಕುರಿತು ಪರಿಶೀಲನಾ ಸಭೆ
ತುಮಕೂರು, 19 ಜುಲೈ (ಹಿ.ಸ.): ಆ್ಯಂಕರ್:ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಸಮಗ್ರ ಪರಿಶೀಲನೆಗಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶನಿವಾರ ವೀಡಿಯೊ ಸಂವಾದದ ಮೂಲಕ ರಾಜ್ಯ ಮಟ್ಟದ ಪರಿಶೀಲನಾ ಸಭೆ ನಡೆಯಿತು. ತುಮಕೂರು ಜಿಲ್ಲಾಧಿಕಾರಿಗಳ ಕಚೇರ
Meeting


ತುಮಕೂರು, 19 ಜುಲೈ (ಹಿ.ಸ.):

ಆ್ಯಂಕರ್:ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಸಮಗ್ರ ಪರಿಶೀಲನೆಗಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶನಿವಾರ ವೀಡಿಯೊ ಸಂವಾದದ ಮೂಲಕ ರಾಜ್ಯ ಮಟ್ಟದ ಪರಿಶೀಲನಾ ಸಭೆ ನಡೆಯಿತು.

ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ಕೆಎಸ್‌ವಾನ್ ವಿಡಿಯೊ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದರು.

ಸಭೆಯಲ್ಲಿ ಹವಾಮಾನ ಪರಿಸ್ಥಿತಿ ಮತ್ತು ಮುಂದಿನ ದಿನಗಳ ಮಳೆ ಮುನ್ಸೂಚನೆ, ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಕುಡಿಯುವ ನೀರಿನ ಪೂರೈಕೆ, ಬಹುಗ್ರಾಮ ಮತ್ತು ಏಕಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿ, ಸಣ್ಣ ನೀರಾವರಿ ಕೆರೆಗಳಲ್ಲಿನ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಬರ ನಿರ್ವಹಣಾ ಕಾರ್ಯಪಡೆಗಳ ಚಟುವಟಿಕೆಗಳು, ವಿಬಿಗ್ರಾಮ್ ಯೋಜನೆಯ ಪ್ರಗತಿ ಹಾಗೂ ಜಿಲ್ಲೆಯಲ್ಲಿ ಕೊರೆಸಲಾದ ಯಶಸ್ವಿ ಮತ್ತು ವಿಫಲ ಕೊಳವೆಬಾವಿಗಳ ವಿವರಗಳ ಕುರಿತು ಸವಿಸ್ತಾರವಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಅಗತ್ಯ ಮೂಲಸೌಲಭ್ಯಗಳ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಕಾರ್ಯನಿರ್ವಹಿಸುವಂತೆ ಸಭೆಯಲ್ಲಿ ನಿರ್ದೇಶನ ನೀಡಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande