
ಕೋಲಾರ, 19 ಜುಲೈ (ಹಿ.ಸ.):
ಆ್ಯಂಕರ್:
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪ್ರಸಿದ್ಧ ಕುರುಡುಮಲೆ ವಿನಾಯಕನ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬೆಳಿಗ್ಗೆ 10 ಗಂಟೆ ಸುಮಾರಿಗೆ ತಮ್ಮ ಮಗಳು, ಅಳಿಯ ಹಾಗೂ ಮೊಮ್ಮಕ್ಕಳೊಂದಿಗೆ ದೇವಾಲಯಕ್ಕೆ ಆಗಮಿಸಿದ ಯಡಿಯೂರಪ್ಪ ಅವರು, ವಿಘ್ನನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ರಾಜಕೀಯ ನಾಯಕರ ಅಚ್ಚುಮೆಚ್ಚಿನ ದೈವಸ್ಥಾನವಾಗಿರುವ ಕುರುಡುಮಲೆ ವಿನಾಯಕನಿಗೆ, ಯಡಿಯೂರಪ್ಪ ಅವರು ಚುನಾವಣೆಗಳ ಸಂದರ್ಭ ಸೇರಿದಂತೆ ಹಲವು ಬಾರಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು ಯಡಿಯೂರಪ್ಪ ಅವರು ರಾಜ್ಯಪಾಲರಾಗಲಿ ಮತ್ತು ಅವರ ಮಕ್ಕಳು ಉತ್ತಮ ರಾಜಕೀಯ ಸ್ಥಾನಕ್ಕೇರಲಿ ಎಂದು ವಿಶೇಷ ಪ್ರಾರ್ಥನೆ ಮಾಡಿದರು.
ಈ ಭೇಟಿಯ ವೇಳೆ ಮಾಜಿ ಶಾಸಕ ವೈ. ಸಂಪಂಗಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಸೇರಿದಂತೆ ಜಿಲ್ಲೆಯ ಹಲವು ಪ್ರಮುಖ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII