ಬ್ಯಾಡರಹಳ್ಳಿಯಲ್ಲಿ ಚಿರತೆ ಹಾವಳಿ:ಆತಂಕದಲ್ಲಿ ನಿವಾಸಿಗಳು
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್ : ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ವ್ಯಾಪ್ತಿಯ ಭಾರತ ನಗರದಲ್ಲಿ ಮತ್ತೊಮ್ಮೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಇದರ ಚಲನವಲನ ಸೆರೆಯಾಗಿದೆ. ಕೆಲವೇ ದಿನಗಳ ಅಂತರದಲ್ಲಿ ಚಿರತೆಯ ದೃಶ್ಯಗಳು ಕಂಡಿದ್ದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ
cctv-captures-leopard


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್ :

ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ವ್ಯಾಪ್ತಿಯ ಭಾರತ ನಗರದಲ್ಲಿ ಮತ್ತೊಮ್ಮೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಇದರ ಚಲನವಲನ ಸೆರೆಯಾಗಿದೆ. ಕೆಲವೇ ದಿನಗಳ ಅಂತರದಲ್ಲಿ ಚಿರತೆಯ ದೃಶ್ಯಗಳು ಕಂಡಿದ್ದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕವನ್ನುಂಟುಮಾಡಿದೆ.

ಸಿಸಿಟಿವಿ ದೃಶ್ಯಗಳಲ್ಲಿ ಚಿರತೆಯು ಜನವಸತಿ ಪ್ರದೇಶದಲ್ಲಿ ಸಂಚರಿಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದ್ದು, ಇದು ಸಾರ್ವಜನಿಕರ ನಿದ್ದೆಗೆಡಿಸಿದೆ. ಕಳೆದ ಹಲವು ದಿನಗಳಿಂದ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನುಗಳನ್ನು ಇರಿಸಿ ಕಾರ್ಯಾಚರಣೆ ನಡೆಸುತ್ತಿದ್ದರೂ, ಚಿರತೆಯು ಅಷ್ಟೇ ಚಾಣಾಕ್ಷತನದಿಂದ ತಪ್ಪಿಸಿಕೊಳ್ಳುತ್ತಿದೆ.

ಇಲಾಖೆಯ ಪ್ರಯತ್ನಗಳು ವಿಫಲವಾಗುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಸಂಜೆ ಮತ್ತು ರಾತ್ರಿ ವೇಳೆ ಹೊರಬರಲು ಜನರು ಭಯಪಡುತ್ತಿದ್ದು, ವಿಶೇಷವಾಗಿ ಶಾಲಾ ಮಕ್ಕಳು ಮತ್ತು ವೃದ್ಧರ ಸುರಕ್ಷತೆಗಾಗಿ ಪೋಷಕರು ಚಿಂತಿತರಾಗಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆಯು ಈ ಚಿರತೆಯನ್ನು ಸೆರೆಹಿಡಿಯಲು ಹೈಟೆಕ್ ಉಪಕರಣಗಳು ಮತ್ತು ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸದ್ಯಕ್ಕೆ ಭದ್ರತೆಯ ದೃಷ್ಟಿಯಿಂದ ಅಧಿಕಾರಿಗಳು ಎಚ್ಚರಿಕೆಯಿಂದ ಇರುವಂತೆ ನಿವಾಸಿಗಳಿಗೆ ಸೂಚಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande