ಬರ ಪರಿಸ್ಥಿತಿ ಕುರಿತು ವಾಸ್ತವಿಕ ವರದಿ ನೀಡಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಸಭೆ ನಡೆಸಿ, ಅಧಿಕಾರಿಗಳಿಗೆ ಕಠಿಣ ಸೂಚನೆಗಳನ್ನು ನೀಡಿದ್ದಾರೆ. ಸರ್ಕಾರದ ವತಿಯಿಂದ ಎಲ್ಲಾ ಅನುದಾನ ಮತ್ತು ಸೌಲ
cm-dk-shivakumar


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಸಭೆ ನಡೆಸಿ, ಅಧಿಕಾರಿಗಳಿಗೆ ಕಠಿಣ ಸೂಚನೆಗಳನ್ನು ನೀಡಿದ್ದಾರೆ. ಸರ್ಕಾರದ ವತಿಯಿಂದ ಎಲ್ಲಾ ಅನುದಾನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಕೇವಲ ಕಾಗದದ ಮೇಲಿನ ವರದಿಗಳನ್ನು ನಾನು ಸ್ವೀಕರಿಸುವುದಿಲ್ಲ, ವಾಸ್ತವಿಕ 'ಫೀಲ್ಡ್ ರಿಪೋರ್ಟ್' ಮುಖ್ಯ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ರಾಜ್ಯದ 178 ತಾಲ್ಲೂಕುಗಳಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಶೇ. 60ರಷ್ಟು ಮಳೆ ಕೊರತೆ ಕಾಣಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗಾಗಿ ತಲಾ ಒಂದು ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದೆ. ಬೋರ್ವೆಲ್ ಕೊರೆಸುವಲ್ಲಿ ಅಕ್ರಮ ಅಥವಾ ನಕಲಿ ವರದಿಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದರು. ಅಲ್ಲದೆ, ಬೋರ್ವೆಲ್ ಕೊರೆಯುವ ಪ್ರಕ್ರಿಯೆಯ ವೀಡಿಯೊ ದಾಖಲೆ ಕಡ್ಡಾಯಗೊಳಿಸಿದ್ದಾರೆ.

ಅಧಿಕಾರಿಗಳ ಕರ್ತವ್ಯ ಲೋಪದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ಸಭೆಯ ನಡುವೆ ಫೋನ್ನಲ್ಲಿ ಮಗ್ನರಾಗಿದ್ದ ಅಧಿಕಾರಿಯ ವರ್ತನೆಯನ್ನು ತರಾಟೆಗೆ ತೆಗೆದುಕೊಂಡರು. ನಿಮ್ಮ ತಂಡದ ಕೆಲಸದ ವೇಗ ಸರ್ಕಾರಕ್ಕೆ ಮುಖ್ಯ. ರೈತರ ಹಿತವೇ ನಿಮ್ಮ ಮೊದಲ ಆದ್ಯತೆಯಾಗಬೇಕು, ಎಂದು ತಾಕೀತು ಮಾಡಿದರು.

ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ವರದಿ ಸಲ್ಲಿಸಬೇಕಿದೆ. ಹೀಗಾಗಿ, ಬೆಳೆ ವಿಮೆ ವಿಚಾರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆಯೂ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಟ್ರಾನ್ಸ್ಫಾರ್ಮರ್ಗಳ ಸನ್ನದ್ಧತೆ, ಕೃಷಿ ಮತ್ತು ಪಶು ಸಂಗೋಪನಾ ಇಲಾಖೆಗಳ ಸಮನ್ವಯದೊಂದಿಗೆ 'ಟೀಮ್ ಕರ್ನಾಟಕ' ಆಗಿ ಕಾರ್ಯನಿರ್ವಹಿಸಿ, ರಾಜ್ಯವನ್ನು ಬರಗಾಲದಿಂದ ರಕ್ಷಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ಸಿಎಂ ಆದೇಶಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande