ಚೆನ್ನಮ್ಮ ದೇವೇಗೌಡರ ನಿಧನ: ಅಂತಿಮ ನಮನ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರ, 19 ಜುಲೈ (ಹಿ.ಸ.) ಆಂಕರ್ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಚೆನ್ನಮ್ಮ (89) ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತಮ್ಮ ಪತ್ನಿ ಹಾಗೂ ದಿವಂಗತ ಎಸ್.ಎಂ
DKShivakumar


ಬೆಂಗಳೂರ, 19 ಜುಲೈ (ಹಿ.ಸ.)

ಆಂಕರ್ :

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃ ಸ್ವರೂಪಿ ಚೆನ್ನಮ್ಮ (89) ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತಮ್ಮ ಪತ್ನಿ ಹಾಗೂ ದಿವಂಗತ ಎಸ್.ಎಂ. ಕೃಷ್ಣ ಅವರ ಪತ್ನಿಯೊಂದಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್, ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ಅಪಾರ ದೈವ ಭಕ್ತರಾಗಿದ್ದ ಚೆನ್ನಮ್ಮ ಅವರು ಇಡೀ ಕುಟುಂಬಕ್ಕೆ ಬೆನ್ನೆಲುಬಾಗಿ ನಿಂತು ಸೇವೆ ಸಲ್ಲಿಸಿದ ಧೀಮಂತ ಮಹಿಳೆ. ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ರಾಜಕೀಯ ಕುಟುಂಬದ ಮಹಿಳೆಯಾದರೂ, ರಾಜ್ಯದ ಎಲ್ಲಾ ಹೆಣ್ಣುಮಕ್ಕಳಿಗೆ ತ್ಯಾಗದ ಸ್ವರೂಪಿಯಾಗಿ ಮಾದರಿಯಾಗಿದ್ದರು. ದೇವೇಗೌಡರ ರಾಜಕೀಯ ಯಶಸ್ಸಿನಲ್ಲಿ ಅವರ ಪಾತ್ರ ದೊಡ್ಡದಿದೆ, ಎಂದು ಸ್ಮರಿಸಿದರು.

ಚೆನ್ನಮ್ಮ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಗುವುದು ಮತ್ತು ಸೋಮವಾರ (ಜು.20) ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದರು. ಸರ್ಕಾರದಿಂದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದರು. ಉಸಿರಾಟದ ಸಮಸ್ಯೆಯಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರು, ಚಿಕಿತ್ಸೆ ಫಲಕಾರಿಯಾಗದೆ ಹೃದಯಸ್ತಂಭನದಿಂದ ನಿಧನರಾದರು. ಅವರ ಅಗಲಿಕೆಯಿಂದಾಗಿ ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಡಿ.ಕೆ. ಶಿವಕುಮಾರ್ ಪ್ರಾರ್ಥಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande