ಚೆನ್ನಮ್ಮ ದೇವೇಗೌಡರ ಅಂತಿಮ ದರ್ಶನ ಪಡೆದ ಡಾ. ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃ ಹೃದಯಿ ಚೆನ್ನಮ್ಮ (89) ಅವರ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟ
dr-yathindra-siddaramaiah


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್:

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಮಾತೃ ಹೃದಯಿ ಚೆನ್ನಮ್ಮ (89) ಅವರ ನಿಧನಕ್ಕೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಚಿವರು, ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಚೆನ್ನಮ್ಮ ಅವರನ್ನು ಸ್ಮರಿಸಿದ ಸಚಿವರು, ದೇವೇಗೌಡರ ಸುದೀರ್ಘ ರಾಜಕೀಯ ಜೀವನ ಮತ್ತು ಕುಟುಂಬದ ಏಳು-ಬೀಳಿನ ಹಾದಿಯಲ್ಲಿ ಅವರು ಅಚಲವಾಗಿ ಬೆನ್ನೆಲುಬಾಗಿ ನಿಂತವರು. ಅಂತಹ ಧೀಮಂತ ಮಹಿಳೆಯ ಅಗಲಿಕೆ ನಾಡಿಗೆ ಮತ್ತು ಅವರ ಕುಟುಂಬಕ್ಕೆ ತುಂಬಲಾರದ ನಷ್ಟ, ಎಂದು ಕಂಬನಿ ಮಿಡಿದರು. ಸರಳತೆ ಮತ್ತು ಮಮತೆಯ ಮೂರ್ತರೂಪವಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande