ವಸತಿಶಾಲೆಗಳ ಮಹಿಳಾ ಕೇರ್ಟೇಕರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, 19 ಜುಲೈ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆಗಳಲ್ಲಿ ಖಾಲಿ ಇರುವ ಮಹಿಳಾ ಕೇರ್‌ಟೇಕರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 2026
ವಸತಿಶಾಲೆಗಳ ಮಹಿಳಾ ಕೇರ್ಟೇಕರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ


ಶಿವಮೊಗ್ಗ, 19 ಜುಲೈ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿ ಶಾಲೆಗಳಲ್ಲಿ ಖಾಲಿ ಇರುವ ಮಹಿಳಾ ಕೇರ್‌ಟೇಕರ್ ಹುದ್ದೆಗಳ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಆಶ್ರಮ ವಸತಿಶಾಲೆ-ಹಕ್ಕಿಪಿಕ್ಕಿ ಕ್ಯಾಂಪ್, ಸದಾಶಿವಪುರ ಶಿವಮೊಗ್ಗ ತಾಲೂಕು ಹಾಗೂ ಹಿರೇಮನೆ, ಸಾಗರ ತಾಲೂಕು ಇಲ್ಲಿನ ವಸತಿ ಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಒಂದು ವರ್ಷದ ಅವಧಿಗೆ ಖಾಲಿಯಿರುವ ಮಹಿಳಾ ಕೇರ್‌ಟೇಕರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ನಿಗಧಿಪಡಿಸಿದ ಬಿ.ಎಸ್‌ಸಿ. ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ವಿದ್ಯಾರ್ಹತೆಯನ್ನು ಹೊಂದಿದ್ದು, ಕನಿಷ್ಠ 2 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜು.28 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-200266 ಹಾಗೂ ಶಿವಮೊಗ್ಗ ಮತ್ತು ಸಾಗರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದೆಂದು

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande