ಕಲಾವಿದರು ಹಾಗೂ ಕಲಾತಂಡಗಳಿಂದ ಅರ್ಜಿ ಆಹ್ವಾನ
ಧಾರವಾಡ, 19 ಜುಲೈ (ಹಿ.ಸ.): ಆ್ಯಂಕರ್: ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಆಯೋಜಿಸುವ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಭಾಗವಹಿಸಲು ಶಾಸ್ತ್ರೀಯ ಸಂಗೀತ, ನೃತ್ಯ, ಸುಗಮ ಸಂಗೀತ, ಜನಪದ ವಾದ್ಯ ಮತ್ತು ಗಾಯನ, ಸಮೂಹ ನೃತ್ಯ, ನಾಟಕ, ಬಯಲಾಟ, ಗಮಕ, ಕಥಾ ಕೀರ್ತನೆ ಮುಂತಾದ ಕಲಾಪ್
ಕಲಾವಿದರು ಹಾಗೂ ಕಲಾತಂಡಗಳಿಂದ ಅರ್ಜಿ ಆಹ್ವಾನ


ಧಾರವಾಡ, 19 ಜುಲೈ (ಹಿ.ಸ.):

ಆ್ಯಂಕರ್:

ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ 2026-27ನೇ ಸಾಲಿನಲ್ಲಿ ಆಯೋಜಿಸುವ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಭಾಗವಹಿಸಲು ಶಾಸ್ತ್ರೀಯ ಸಂಗೀತ, ನೃತ್ಯ, ಸುಗಮ ಸಂಗೀತ, ಜನಪದ ವಾದ್ಯ ಮತ್ತು ಗಾಯನ, ಸಮೂಹ ನೃತ್ಯ, ನಾಟಕ, ಬಯಲಾಟ, ಗಮಕ, ಕಥಾ ಕೀರ್ತನೆ ಮುಂತಾದ ಕಲಾಪ್ರಕಾರಗಳಲ್ಲಿ ನಿರತರಾಗಿರುವ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಂಸ್ಕøತಿಕ ಸೌರಭ, ಯುವ ಸೌರಭ ಹಾಗೂ ಚಿಗುರು ಮತ್ತು ಜನಪರ ಉತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಚ್ಚಿಸುವ ಕಲಾವಿದರು ಅರ್ಜಿ ಸಲ್ಲಿಸಬಹುದು. ಆಕಾಶವಾಣಿಯ ಬಿ, ಬಿ-ಹೈ ಮತ್ತು ಎ ಗ್ರೇಡ್ ಕಲಾವಿದರಿಗೆ ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕøತ ಕಲಾವಿದರನ್ನು ಸಾಂಸ್ಕøತಿಕ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತಿದೆ.

ಕಲಾವಿದರು 30 ವರ್ಷ ಮೇಲ್ಪಟ್ಟವರಾಗಿರಬೇಕು. 15 ರಿಂದ 30 ವರ್ಷದ ಪ್ರತಿಭಾವಂತ ಯುವ ಕಲಾವಿದರನ್ನು ಯುವ ಸೌರಭ ಕಾರ್ಯಕ್ರಮಕ್ಕೆ ಪರಿಗಣಿಸಲಾಗುತ್ತಿದೆ. 8 ರಿಂದ 14 ವರ್ಷದ ಪ್ರತಿಭಾವಂತ ಬಾಲ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಲು ಚಿಗುರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ‘ಜನಪರ ಉತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಪರಿಶಿಷ್ಟ ಜಾತಿಯ ಕಲಾವಿದರು ಹಾಗೂ ಕಲಾತಂಡದವರು ಅರ್ಜಿ ಸಲ್ಲಿಸಬಹುದಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಾರ್ಯಕ್ರಮಗಳಲ್ಲಿ ಹಾಗೂ ಸಾಂಸ್ಕøತಿಕ ಸೌರಭ, ಯುವ ಸೌರಭ, ಚಿಗುರು ಮತ್ತು ಜನಪರ ಉತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿಚ್ಚಿಸುವ ಕಲಾವಿದರು, ಕಲಾತಂಡದವರು ಕಲಾಸೇವೆಯ ದಾಖಲೆಗಳು ಹಾಗೂ ಸ್ವ-ವಿವರ ಅರ್ಜಿಯನ್ನು ಜುಲೈ 24, 2026 ರೊಳಗಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2442909 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande