ರಾಜ್ಯದಲ್ಲಿ ಮರುಕಳಿಸಿದ ಮಳೆ: ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, 19 ಜುಲೈ (ಹಿ.ಸ.): ಆ್ಯಂಕರ್: ಕಳೆದ ಕೆಲವು ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ರಾಜ್ಯದ ಜನತೆಗೆ ವರುಣ ದೇವ ಕೃಪೆ ತೋರಿದ್ದು, ಶನಿವಾರ ಹಲವೆಡೆ ಮಳೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ವರದಿಯಂತೆ ಇಂದಿನಿಂದ ಜುಲೈ 23ರ ವರೆಗೆ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ ಗಾ
karnataka-rains


ಬೆಂಗಳೂರು, 19 ಜುಲೈ (ಹಿ.ಸ.):

ಆ್ಯಂಕರ್:

ಕಳೆದ ಕೆಲವು ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ರಾಜ್ಯದ ಜನತೆಗೆ ವರುಣ ದೇವ ಕೃಪೆ ತೋರಿದ್ದು, ಶನಿವಾರ ಹಲವೆಡೆ ಮಳೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ವರದಿಯಂತೆ ಇಂದಿನಿಂದ ಜುಲೈ 23ರ ವರೆಗೆ ರಾಜ್ಯಾದ್ಯಂತ ಗುಡುಗು, ಸಿಡಿಲು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಸಮುದ್ರದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಸೇರಿದಂತೆ ಮಲೆನಾಡಿನ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇನ್ನು ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣವಿದ್ದು, ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande