
ಚಿಕ್ಕಬಳ್ಳಾಪುರ, 19 ಜುಲೈ (ಹಿ.ಸ.):
ಆ್ಯಂಕರ್:ಚಿಕ್ಕಬಳ್ಳಾಪುರದ ಅಂಬಾರಿ ಪ್ಯಾಲೇಸ್ ಸಮುದಾಯ ಭವನದಲ್ಲಿ ಬಲಗೈ ಜಾತಿಗಳ ಒಕ್ಕೂಟದ ಜಿಲ್ಲಾ ಸಮಿತಿ ಆಯೋಜಿಸಿದ್ದ ಛಲವಾದಿ–ಹೊಲೆಯ ಬಲಗೈ ಜಾತಿಗಳ ಜಾಗೃತಿ ಸಮಾವೇಶದಲ್ಲಿ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ, ನಾಯಕತ್ವವಿಲ್ಲದ ಸಮುದಾಯಗಳು ಸಾಮಾಜಿಕ ಹಾಗೂ ರಾಜಕೀಯವಾಗಿ ಅನಾಥವಾಗುತ್ತವೆ ಎಂದು ಹೇಳಿದರು. ಹಕ್ಕು ಮತ್ತು ಅಧಿಕಾರ ಆಧಾರಿತ ರಾಜಕಾರಣವನ್ನು ಬಲಪಡಿಸಲು ಎಡ–ಬಲ ಎಂಬ ಭೇದವಿಲ್ಲದೆ ಸಮುದಾಯಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ರಾಜ್ಯದಾದ್ಯಂತ ಸಮುದಾಯಗಳ ಐಕ್ಯತೆ ಮತ್ತು ಜಾಗೃತಿಯನ್ನು ಹೆಚ್ಚಿಸುವ ಉದ್ದೇಶದಿಂದ ಇಂತಹ ಜಾಗೃತಿ ಸಮಾವೇಶಗಳನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯಾಪಕವಾಗಿ ಆಯೋಜಿಸಬೇಕೆಂದು ಅವರು ಆಶಯ ವ್ಯಕ್ತಪಡಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.