ಮತದಾರರ ಸಹಾಯ ಕೇಂದ್ರ ಉದ್ಘಾಟಿಸಿದ ಶಾಸಕ ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ, 19 ಜುಲೈ (ಹಿ.ಸ.): ಆ್ಯಂಕರ್: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 56ರ ತೋರವಿ ಹಕ್ಕಲದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಸ್ಥಾಪಿಸಲಾದ ಮತದಾರರ ಸಹಾಯ ಕೇಂದ್ರವನ್ನು ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ
ಮಹೇಶ ಟೆಂಗಿನಕಾಯಿ


ಹುಬ್ಬಳ್ಳಿ, 19 ಜುಲೈ (ಹಿ.ಸ.):

ಆ್ಯಂಕರ್:

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 56ರ ತೋರವಿ ಹಕ್ಕಲದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಸ್ಥಾಪಿಸಲಾದ ಮತದಾರರ ಸಹಾಯ ಕೇಂದ್ರವನ್ನು ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರು ಸಹಾಯ ಕೇಂದ್ರದ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಅಗತ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯೆ ಶ್ರೀಮತಿ ಚಂದ್ರಿಕಾ ಮೇಸ್ತ್ರಿ, ಕ್ಷೇತ್ರದ ಬಿಎಲ್‌ಎ–1 ಪ್ರಶಾಂತ ಜಾಧವ, ಪ್ರಧಾನ ಕಾರ್ಯದರ್ಶಿ ಪ್ರವೀಣ ಪವಾರ ಹಾಗೂ ವಾರ್ಡ್‌ನ ಪ್ರಮುಖರು ಮತ್ತು ಮಹಿಳೆಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande