ಎಸ್ಐಆರ್; ಕೊಪ್ಪಳ ಜಿಲ್ಲೆಯಲ್ಲಿ ಎರಡು ದಿನದಲ್ಲಿ 3,62,915 ಗಣತಿ ನಮೂನೆ ವಿತರಣೆ
ಕೊಪ್ಪಳ , 02 ಜುಲೈ (ಹಿ.ಸ.): ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಠರಣೆ-2026ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ಹಾಗೂ ಜುಲೈ 1ರ ಸಂಜೆ 06 ಗಂಟೆವರೆಗೆ ಒಟ್ಟು 3,62,915 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣ
ಎಸ್ಐಆರ್; ಕೊಪ್ಪಳ ಜಿಲ್ಲೆಯಲ್ಲಿ ಎರಡು ದಿನದಲ್ಲಿ 3,62,915 ಗಣತಿ ನಮೂನೆ ವಿತರಣೆ


ಕೊಪ್ಪಳ , 02 ಜುಲೈ (ಹಿ.ಸ.):

ಆ್ಯಂಕರ್ : ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಠರಣೆ-2026ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ಹಾಗೂ ಜುಲೈ 1ರ ಸಂಜೆ 06 ಗಂಟೆವರೆಗೆ ಒಟ್ಟು 3,62,915 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ ಅವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಜೂನ್ 30ರಂದು 1315 ಬೂತ್ ಮಟ್ಟದ ಅಧಿಕಾರಿಗಳು ಗಣತಿ ನಮೂನೆಗಳನ್ನು ವಿತರಿಸುವ ಸಲುವಾಗಿ ಮನೆಮನೆ ಭೇಟಿ ಕಾರ್ಯ ಆರಂಭಿಸಿದ್ದು, ಮನೆ ಭೇಟಿ ಸಂದರ್ಭದಲ್ಲಿ ಜಿಲ್ಲೆಯ ಸಾರ್ವಜನಿಕರು ಸಹಕಾರ ನೀಡಿ ಬೂತ್ ಮಟ್ಟದ ಅಧಿಕಾರಿಗಳು ಕೋರುವ ಮಾಹಿತಿಯನ್ನು ಒದಗಿಸಬೇಕು.

ಗಣತಿ ನಮೂನೆಗಳ ಹಂಚಿಕೆ ಮಾಡಲು ಹಾಗೂ ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಸಂಗ್ರಹಿಸಲು ಜುಲೈ 29ರವರೆಗೆ ಅವಕಾಶವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande