
ಬೆಂಗಳೂರು, 02 ಜುಲೈ (ಹಿ.ಸ.):
ಆ್ಯಂಕರ್:ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಘಟನೆಯ ಕುರಿತು ಸಕಾಲದಲ್ಲಿ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ, ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರವನ್ನು ಘೋಷಿಸಿ ಅಗತ್ಯ ನೆರವು ಒದಗಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.