


ಬಳ್ಳಾರಿ, 02 ಜುಲೈ (ಹಿ.ಸ.):
ಆ್ಯಂಕರ್ : ನಗರದ ಶ್ರೀರಾಂಪುರ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಭೇಟಿ ನೀಡಿ ಕಟ್ಟಡ, ತಡೆಗೋಡೆ, ಮೈದಾನ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸೌಲಭ್ಯಗಳು ಹಾಗೂ ಶಾಲಾ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಸ್ವಚ್ಛತೆ ಮತ್ತು ಗುಣಮಟ್ಟಕ್ಕೆ ಆದ್ಯತೆ ನೀಡಲು ಸೂಚನೆ:
ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಸುರಕ್ಷಿತ ಮತ್ತು ಸ್ವಚ್ಛ ವಾತಾವರಣ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಶಾಲಾ ಆವರಣದಲ್ಲಿ ಎಲ್ಲೂ ಕಸ ಕಡ್ಡಿಗಳು ಇರದಂತೆ ನಿರಂತರ ಸ್ವಚ್ಛತೆ ಕಾಪಾಡಬೇಕು. ಮೈದಾನದ ಸುತ್ತಲೂ ಗಿಡಗಳನ್ನು ನೆಟ್ಟು ಪೆÇೀಷಿಸಬೇಕು. ಬೇಕಾದ ಅಗತ್ಯ ಮೂಲ ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿಪಡಿಸುವ ಮೂಲಕ ಮಾದರಿ ಶಾಲೆಯನ್ನಾಗಿಸಬೇಕು ಎಂದು ಶಾಲಾ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಶಾಲೆಯಲ್ಲಿ 16 ಸುಸಜ್ಜಿತ ಅತ್ಯಾಧುನಿಕ ತರಗತಿ ಕೊಠಡಿಗಳು, 3 ಲ್ಯಾಬ್, 4 ಶೌಚಾಲಯಗಳು ಇದ್ದು, ಶಾಲೆಗೆ ಒಂದೆಡೆ ಸರಿಯಾದ ತಡೆಗೋಡೆಯಿಲ್ಲ; ಸೂಕ್ತ ಕಾರ್ಯಯೋಜನೆ ರೂಪಿಸಿ ತಡೆಗೋಡೆ ನಿರ್ಮಿಸಬೇಕು ಎಂದು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಶಾಲೆಯ ಮುಖ್ಯ ಶಿಕ್ಷಕ ಸಕ್ಲೈನ್ ಭಾಷಾ ಅವರು, ಶಾಲೆಗೆ ಸಿಸಿಟಿವಿ ಅಳವಡಿಕೆ ಅಗತ್ಯವಾಗಿದೆ ಎಂದು ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ನಿರ್ಮಿತಿ ಕೇಂದ್ರದ ಅಧಿಕಾರಿ ವಿರೇಶ್, ಸಹ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್