ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ
ಬಾಗಲಕೋಟೆ, 02 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಳ್ಳೂರ ಆರ್.ಸಿ. ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ವಿಧಿವತ್ತಾಗಿ ಭೂಮಿಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಶಾಸಕ ಆರ್ ಬಿ ತಿಮ್ಮಾಪುರ ಅಧಿಕೃತ ಚಾಲನೆ ನೀಡಿದರು. ಗ್ರಾಮದ ಮೂಲಸೌಕರ್ಯಗಳನ್ನು ಮತ್ತ
ಪೂಜೆ


ಬಾಗಲಕೋಟೆ, 02 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ

ಮುಧೋಳ ತಾಲೂಕಿನ ಬಳ್ಳೂರ ಆರ್.ಸಿ. ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ವಿಧಿವತ್ತಾಗಿ ಭೂಮಿಪೂಜೆ ನೆರವೇರಿಸಿ ಕಾಮಗಾರಿಗಳಿಗೆ ಶಾಸಕ ಆರ್ ಬಿ ತಿಮ್ಮಾಪುರ ಅಧಿಕೃತ ಚಾಲನೆ ನೀಡಿದರು. ಗ್ರಾಮದ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ರಸ್ತೆ, ಕುಡಿಯುವ ನೀರು, ಚರಂಡಿ, ಸಾರ್ವಜನಿಕ ಕಟ್ಟಡಗಳು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿಯ ವೇಗ ಹೆಚ್ಚಿಸುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕಿವಡಿ (ವಕೀಲರು), ಮುಧೋಳ ನಗರ ಘಟಕದ ಅಧ್ಯಕ್ಷ ರಾಘು ಮೊಕಾಶಿ, ಎಪಿಎಂಸಿ ಅಧ್ಯಕ್ಷ ಸಂಗಪ್ಪ ಇಮ್ಮನ್ನವರ, ಮುಖಂಡ ಎಸ್.ಪಿ. ದಾನಪ್ಪಗೊಳ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಹಿರಿಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಅವರು, ಜನರ ಪ್ರೀತಿ, ಆಶೀರ್ವಾದ ಹಾಗೂ ವಿಶ್ವಾಸವೇ ಜನಸೇವೆಗೆ ಪ್ರೇರಣೆಯಾಗಿದೆ. ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಯಾವುದೇ ರಾಜಿ ಇಲ್ಲದೆ ಶ್ರಮಿಸುತ್ತೇನೆ. ಜನರ ನಿರೀಕ್ಷೆಗೆ ತಕ್ಕಂತೆ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಭೂಮಿಪೂಜೆ ಕಾರ್ಯಕ್ರಮದ ಬಳಿಕ ಗ್ರಾಮಸ್ಥರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿರುವುದನ್ನು ಸ್ವಾಗತಿಸಿ ಸಂತಸ ವ್ಯಕ್ತಪಡಿಸಿದರು. ಶೀಘ್ರದಲ್ಲೇ ಕಾಮಗಾರಿಗಳು ಪೂರ್ಣಗೊಂಡು ಗ್ರಾಮಸ್ಥರಿಗೆ ಉತ್ತಮ ಮೂಲಸೌಕರ್ಯಗಳು ದೊರೆಯಲಿವೆ ಎಂಬ ವಿಶ್ವಾಸ ವ್ಯಕ್ತವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande