
ಹುಬ್ಬಳ್ಳಿ, 02 ಜುಲೈ (ಹಿ.ಸ.):
ಆ್ಯಂಕರ್:ಲೋಕಹಿತ ಟ್ರಸ್ಟ್ ಹಾಗೂ ವಿಶ್ವ ಸಂವಾದ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ನಾರದ ಜಯಂತಿ ಅಂಗವಾಗಿ ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜುಲೈ 4, ಶನಿವಾರ ಹುಬ್ಬಳ್ಳಿಯ ಜೆ.ಸಿ. ನಗರದ ಮುನ್ಸಿಪಲ್ ಎಂಪ್ಲಾಯೀಸ್ ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಕಳೆದ ಹಲವು ವರ್ಷಗಳಿಂದ ಮಹರ್ಷಿ ನಾರದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿರುವ ಲೋಕಹಿತ ಟ್ರಸ್ಟ್ ಮತ್ತು ವಿಶ್ವ ಸಂವಾದ ಕೇಂದ್ರ, ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಹಿರಿಯರನ್ನು ಗೌರವಿಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದೆ.
ಈ ಬಾರಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಹಾಗೂ ಮುಖ್ಯ ವಕ್ತಾರರಾಗಿ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಅಧಿಕಾರಿ, ಏಕವ್ಯಕ್ತಿ ತಾಳಮದ್ದಲೆ ಕಲಾವಿದ ದಿವಾಕರ ಹೆಗಡೆ ಭಾಗವಹಿಸಿ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ಮನೋಜ ಪಾಟೀಲ್ ಮತ್ತು ಹಿರಿಯ ಛಾಯಾಗ್ರಾಹಕ, ದೂರದರ್ಶನದ ವರದಿಗಾರ ಕಿರಣ ಬಾಕಳೆ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಲೋಕಹಿತ ಟ್ರಸ್ಟ್ ಕಾರ್ಯದರ್ಶಿ ಶ್ರೀಧರ ನಾಡಗೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.