ಕೌಡೆ ಪೀರ ಮೊಹರಂ ಹಬ್ಬ: ಐದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ
ಕೊಪ್ಪಳ, 02 ಜುಲೈ (ಹಿ.ಸ.): ಆ್ಯಂಕರ್ : ಮೊಹರಂ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಗದಿತ ಅವಧಿಗೆ ಮದ್ಯ ಮಾರಾಟ, ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ ಇಟ್ನಾಳ ಅವರು ಆ
ಕೌಡೆ ಪೀರ ಮೊಹರಂ ಹಬ್ಬ: ಐದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ


ಕೊಪ್ಪಳ, 02 ಜುಲೈ (ಹಿ.ಸ.):

ಆ್ಯಂಕರ್ : ಮೊಹರಂ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಯ ಐದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಗದಿತ ಅವಧಿಗೆ ಮದ್ಯ ಮಾರಾಟ, ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆಯ ಮೇರೆಗೆ ಕೌಡೆ ಪೀರ್ ಮೊಹರಂ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟ, ಸಾಗಣೆ ಮತ್ತು ವಿತರಣೆಗೆ ತಾತ್ಕಾಲಿಕ ನಿಬರ್ಂಧ ವಿಧಿಸಿ, ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರ ಅನ್ವಯ ಮದ್ಯ ಮಾರಾಟ , ನಿಷೇಧಿಸಿ ಆದೇಶ ಜಾರಿಗೊಳಿಸಲಾಗಿದೆ.

ಅದರಂತೆ ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 2ರಂದು ಬೆಳಿಗ್ಗೆ 8 ಗಂಟೆಯಿಂದ ಜುಲೈ 3ರ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟ , ನಿಷೇಧಿಸಲಾಗಿದೆ. ಅದೇ ರೀತಿ ಗಂಗಾವತಿ ಗ್ರಾಮೀಣ, ಗಂಗಾವತಿ ನಗರ, ಕನಕಗಿರಿ ಹಾಗೂ ಮುನಿರಾಬಾದ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜುಲೈ 4ರಂದು ಬೆಳಿಗ್ಗೆ 8 ಗಂಟೆಯಿಂದ ಜುಲೈ 5ರ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟ, ಸಾಗಣೆ ಮತ್ತು ವಿತರಣೆಯನ್ನು, ನಿಷೇಧಿಸಲಾಗಿದೆ.

ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆ ತರಲು ನಿರ್ಲಕ್ಷ್ಯ ತೋರಿಸಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande