
ಬಳ್ಳಾರಿ, 02 ಜುಲೈ (ಹಿ.ಸ.):
ಆ್ಯಂಕರ್ :
ಬೆಳಗಲ್ ರಸ್ತೆಯ ಆಕಾಶವಾಣಿ ಕೇಂದ್ರದ ಹತ್ತಿರವಿರುವ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟದ ತಟ್ಟೆ ಹಾಗೂ ಲೋಟಗಳನ್ನು ದೇಣಿಗೆಯಾಗಿ ನೀಡಲಾಗಿದೆ.
ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಹಾಲು ಸೇವಿಸಲು ತಟ್ಟೆ ಹಾಗೂ ಲೋಟಗಳ ಕೊರತೆ ಇರುವುದನ್ನು ಮನಗಂಡು ಬಳ್ಳಾರಿಯ ತಾಳೂರು ರಸ್ತೆ ನಿವಾಸಿಯಾಗಿದ್ದು, ಪ್ರಸ್ತುತ ಲಂಡನ್ನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಶೇಕ್ಷಾವಲಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ 130 ಊಟದ ತಟ್ಟೆಗಳು ಮತ್ತು 130 ಹಾಲಿನ ಲೋಟಗಳನ್ನು ಶಾಲೆಗೆ ಉಚಿತವಾಗಿ ಕೊಡುಗೆಯಾಗಿ ನೀಡಿದ್ದಾರೆ.
ಮಕ್ಕಳ ಶೈಕ್ಷಣಿಕ ಮತ್ತು ಮೂಲಸೌಕರ್ಯದ ಅಗತ್ಯಕ್ಕೆ ಸ್ಪಂದಿಸಿದ ದಾನಿ ಶೇಕ್ಷಾವಲಿ ಅವರಿಗೆ ಮೌಲಾನಾ ಆಜಾದ್ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಕೃತಜ್ಞತೆ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್