ನಾಳೆ ಸಚಿವ ಡಾ. ಶರಣಪ್ರಕಾಶ ಪಾಟೀಲ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ , 02 ಜುಲೈ (ಹಿ.ಸ.): ಆ್ಯಂಕರ್ : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಜುಲೈ 03ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ 08 ಗಂಟೆಗೆ
Minister Dr. Sharan Prakash Patil's tour of Koppal district on July 03


ಕೊಪ್ಪಳ , 02 ಜುಲೈ (ಹಿ.ಸ.):

ಆ್ಯಂಕರ್ : ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಜುಲೈ 03ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 08 ಗಂಟೆಗೆ ಹುಬ್ಬಳ್ಳಿಯಿಂದ ನಿರ್ಗಮಿಸಿ, ರಸ್ತೆ ಮಾರ್ಗವಾಗಿ ಬೆಳಿಗ್ಗೆ 10.15 ಗಂಟೆಗೆ ಕೊಪ್ಪಳಕ್ಕೆ ಆಮಿಸುವರು. ಬಳಿಕ 10-30ಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಪ್ರಕೃತಿ ವಿಕೋಪದ ಕುರಿತ ಸಭೆಯಲ್ಲಿ ಪಾಲ್ಗೊಳ್ಳುವರು.

ನಂತರ ಸಚಿವರು ಅಂದು ಮಧ್ಯಾಹ್ನ 12.15ಕ್ಕೆ ಕೊಪ್ಪಳದಿಂದ ರಸ್ತೆ ಮೂಲಕ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande