ನಾಳೆ ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ರಾಯಚೂರು ಜಿಲ್ಲಾ ಪ್ರವಾಸ
ರಾಯಚೂರು, 02 ಜುಲೈ (ಹಿ.ಸ.): ಆ್ಯಂಕರ್ : ರಾಯಚೂರು ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಜುಲೈ 03 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರ
ನಾಳೆ ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ರಾಯಚೂರು ಜಿಲ್ಲಾ ಪ್ರವಾಸ


ರಾಯಚೂರು, 02 ಜುಲೈ (ಹಿ.ಸ.):

ಆ್ಯಂಕರ್ : ರಾಯಚೂರು ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಆಗಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು 2026ರ ಜುಲೈ 03 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅವರು ಜುಲೈ 03ರ ಬೆಳಿಗ್ಗೆ 12.15ಕ್ಕೆ ಕೊಪ್ಪಳ ಜಿಲ್ಲೆಯಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಸಂಜೆ 4.15ಕ್ಕೆ ರಾಯಚೂರು ನಗರಕ್ಕೆ ಆಗಮಿಸಲಿದ್ದಾರೆ.

ಸಂಜೆ 4.30ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರಕೃತಿ ವಿಕೋಪದ ಕುರಿತು ಸಭೆ ನಡೆಸಲಿದ್ದಾರೆ.

ಸಭೆಯ ನಂತರ ರಾಯಚೂರಿನಿಂದ ಕಲಬುರಗಿ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande