ಮುಂಗಾರು ಹಂಗಾಮಿನ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
ಕೊಪ್ಪಳ , 02 ಜುಲೈ (ಹಿ.ಸ.): ಆ್ಯಂಕರ್ : ಜಿಲ್ಲೆಯಲ್ಲಿ ಪ್ರಸ್ತುತ ಭಿತ್ತನೆಯಾಗಿರುವ ಬೆಳೆಗಳಿಗೆ ಅವಶ್ಯವಿರುವ ರಸಗೊಬ್ಬರ ಮತ್ತು ಮುಂದೆ ಬಿತ್ತನೆಗೆ ಅಗತ್ಯವಿರುವ ಬೀಜ, ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಿ ಮುಂಗಾರು ಹಂಗಾಮಿನ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಸುರ
Take appropriate measures to manage the monsoon season.


Take appropriate measures to manage the monsoon season.


ಕೊಪ್ಪಳ , 02 ಜುಲೈ (ಹಿ.ಸ.):

ಆ್ಯಂಕರ್ : ಜಿಲ್ಲೆಯಲ್ಲಿ ಪ್ರಸ್ತುತ ಭಿತ್ತನೆಯಾಗಿರುವ ಬೆಳೆಗಳಿಗೆ ಅವಶ್ಯವಿರುವ ರಸಗೊಬ್ಬರ ಮತ್ತು ಮುಂದೆ ಬಿತ್ತನೆಗೆ ಅಗತ್ಯವಿರುವ ಬೀಜ, ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಿ ಮುಂಗಾರು ಹಂಗಾಮಿನ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ಕೃಷಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮುಂಗಾರು ಹಂಗಾಮಿನ ನಿರ್ವಹಣೆಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟಾರೆ 219 ಬಿತ್ತನೆ ಬೀಜ ಹಾಗೂ 99 ರಸಗೊಬ್ಬರ ಮಾದರಿಗಳನ್ನು ಗುಣಮಟ್ಟ ಪರಿಕ್ಷೇಗೆ ಒಳಪಡಿಸಲಾಗಿದ್ದು, ಅದರಲ್ಲಿ 8 ಬಿತ್ತನೆ ಬೀಜ ಮಾದರಿಗಳು ಕಳಪೆಯಾಗಿರುವ ಬಗ್ಗೆ ಕಂಡುಬಂದಿದ್ದು, ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಬೀಜ ಅಧಿನಿಯಮದನ್ವಯ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ಪೂರೈಕೆಯಾಗುವ ರಸಗೊಬ್ಬರವನ್ನು ರೈತರಿಗೆ ಸಮರ್ಪಕವಾಗಿ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.

ಮುಂಗಾರು ಮತ್ತು ಹಿಂಗಾರು ಹಂಗಾಮಿನ ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾರಾಟವನ್ನು ತಡೆಗಟ್ಟಲು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗಿದ್ದು, ಜಿಲ್ಲೆಯಾದ್ಯಂತ ಇರುವ ಬಿತ್ತನೆ ಬೀಜ ಕಾರ್ಯಪಡೆಯು ನಿರಂತರವಾಗಿ ಆಕಸ್ಮಿಕ ದಾಳಿಗಳನ್ನು ನಡೆಸಿ. ದಾಸ್ತಾನು ಮತ್ತು ಗುಣಮಟ್ಟವನ್ನು ಪರಿಶೀಲಿಸಬೇಕು ಎಂದರು.

ಜಿಲ್ಲೆಯಲ್ಲಿ ನಕಲಿ ಅಥವಾ ಕಳಪೆ ಕೃಷಿ ಪರಿಕರಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ, ಅಂತಹ ಮಾರಾಟಗಾರರ ಪರವಾನಗಿಯನ್ನು ತಕ್ಷಣವೇ ಅಮಾನತುಗೊಳಿಸಬೇಕು. ಅಲ್ಲದೆ, ಬೀಜ ಕಾಯ್ದೆ 1966, ಬೀಜ ನಿಯಮಗಳು 1968 ಮತ್ತು ಕೀಟನಾಶಕಗಳ ಕಾಯ್ದೆ 1968 ಮತ್ತು ಕೀಟನಾಶಕ ನಿಯಮ 1971 ಮತ್ತು ತದನಂತರ ರೂಪಿಸಲಾಗಿರುವ ನಿಯಮಾವಳಿಗಳನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಬೇಕು.

ರೈತರು ಕೃಷಿ ಪರಿಕರಗಳನ್ನು ಖರೀದಿಸುವಾಗ ಕಡ್ಡಾಯವಾಗಿ ಅಧಿಕೃತ ರಸೀದಿಯನ್ನು ಪಡೆಯುವಂತೆ ಮತ್ತು ಲೇಬಲ್ ಆಧಾರಿತ ಮಾಹಿತಿಯನ್ನು ಗಮನಿಸುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಮುಖಾಂತರ ರೈತರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಫಸಲ್ ಭೀಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಒತ್ತು ಕೊಡಬೇಕು. ಬೆಳೆ ನಷ್ಟ ಅನುಭವಿಸಿದಲ್ಲಿ ಬೆಳೆವಿಮೆ ಸೌಲಭ್ಯ ಪಡೆಯಲು ರೈತರಿಗೆ ಸಲಹೆ ಮಾಡಬೇಕು. ಬೆಳೆವಿಮೆ ಸೇರಿದಂತೆ ಇನ್ನೀತರ ಕೃಷಿ ಸಂಬಂಧಿ ಸೌಕರ್ಯಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಫ್ಐಡಿ ಹೊಂದುವ ಬಗ್ಗೆ ಸಹ ರೈತ ವರ್ಗಕ್ಕೆ ಸೂಕ್ತ ಮಾರ್ಗದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೇಮಂತ ಕುಮಾರ್, ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ.ಕೃಷ್ಣಮೂರ್ತಿ, ತೋಟಗಾರಿಕೆ ಜಂಟಿ ನಿರ್ದೇಶಕರಾದ ಕೃಷ್ಣ ಸಿ. ಉಕ್ಕುಂದ, ಉಪ ಕೃಷಿ ನಿರ್ದೇಶಕರಾದ ಎಲ್.ಸಿದ್ದೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಅಧಿಕಾರಿಗಳು, ಗೊಬ್ಬರ ಮಾರಾಟ ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande