
ರಾಯಚೂರು, 02 ಜುಲೈ (ಹಿ.ಸ.):
ಆ್ಯಂಕರ್ : ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತಾ ತರಬೇತಿ ಹಾಗೂ ಮೊಬೈಲ್ ಕ್ಯಾಂಟೀನ್ ಖರೀದಿಸಲು ಆಯ್ಕೆಯಾದ ಪ್ರತಿ ಫಲಾನುಭವಿಗೆ ಗರಿಷ್ಠ 5.00 ಲಕ್ಷ ರೂ.ಗಳ ಸಹಾಯಧನ ನೀಡುವ ಯೋಜನೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸದರಿ ಯೋಜನೆಗೆ ರಾಯಚೂರು ಜಿಲ್ಲೆಗೆ ನಿಗಧಿಪಡಿಸಿರುವ ಪರಿಶಿಷ್ಟ ಜಾತಿಯ 06 ಮತ್ತು ಪರಿಶಿಷ್ಟ ಪಂಗಡದ 04 ಒಟ್ಟು 10 ಅಭ್ಯರ್ಥಿಗಳ ಗುರಿ ಹಾಗೂ ಮಾರ್ಗಸೂಚಿಗಳನ್ವಯ ಅರ್ಹವಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆಯ ಸೂಚನಾ ಫಲಕದಲ್ಲಿ ಪ್ರದರ್ಶಿಸಲಾಗಿದೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜುಲೈ 14ರೊಳಗಾಗಿ ಲಿಖಿತ ರೂಪದಲ್ಲಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ನೆಲಮಹಡಿ, ಜಿಲ್ಲಾಡಳಿತ ಭವನ, ಯಕ್ಲಾಸಪುರ ರಾಯಚೂರು–584101 ಇವರಿಗೆ ಕಚೇರಿಯ ವೇಳೆ ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್