ಜುಲೈ 07 ರಂದು ವಾಕ್ ಇನ್-ಇಂಟರ್ವ್ಯೂವ್
ಕೊಪ್ಪಳ, 02 ಜುಲೈ (ಹಿ.ಸ.): ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್ವ್ಯೂವನ್ನು ಜುಲೈ 07 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಜುಲೈ 07 ರಂದು ವಾಕ್ ಇನ್-ಇಂಟರ್ವ್ಯೂವ್


ಕೊಪ್ಪಳ, 02 ಜುಲೈ (ಹಿ.ಸ.):

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್-ಇಂಟರ್ವ್ಯೂವನ್ನು ಜುಲೈ 07 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೊಪ್ಪಳ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಅಭ್ಯರ್ಥಿಗಳು ಪಿ.ಯು.ಸಿ, ಯಾವುದೇ ಪದವಿ ವಿದ್ಯಾಭ್ಯಾಸ ಮುಗಿಸಿದವರು ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಬಹುದು. 18 ರಿಂದ 35 ವರ್ಷದ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande