ಯುವನಿಧಿ ಯೋಜನೆ: ಸೇವಾ ಸಿಂಧು ಪೋರ್ಟ್ಲ್ನಲ್ಲಿ ಅರ್ಜಿ ಸಲ್ಲಿಸಿ
ಕೊಪ್ಪಳ , 02 ಜುಲೈ (ಹಿ.ಸ.): ಆ್ಯಂಕರ್ : ಯುವನಿಧಿ ಯೋಜನೆಯಡಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ. ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾ
ಯುವನಿಧಿ ಯೋಜನೆ: ಸೇವಾ ಸಿಂಧು ಪೋರ್ಟ್ಲ್ನಲ್ಲಿ ಅರ್ಜಿ ಸಲ್ಲಿಸಿ


ಕೊಪ್ಪಳ , 02 ಜುಲೈ (ಹಿ.ಸ.):

ಆ್ಯಂಕರ್ : ಯುವನಿಧಿ ಯೋಜನೆಯಡಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಅಂತಿಮ ದಿನಾಂಕ ನಿಗದಿಯಾಗಿರುವುದಿಲ್ಲ. ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಸೇವಾ ಸಿಂಧು ಪೋರ್ಟ್ಲ್ನಲ್ಲಿ ಚಾಲನೆಯಲ್ಲಿರುತ್ತದೆ.

ಆದಕಾರಣ 2023 ರಿಂದ ಇಲ್ಲಿಯವರೆಗೆ ಪದವಿ ಅಥವಾ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾಗಿ ಅರ್ಜಿ ಸಲ್ಲಿಸದೇ ಇರುವ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟ್ಲ್ ವೆಬ್ಸೈಟ್ http://sevasindhugs.karnataka.gov.in ಮೂಲಕ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯುವನಿಧಿ ಯೋಜನೆಯ ಫಲಾನುಭವಿಗಳು ಪ್ರಸ್ತುತ ಪ್ರತಿ ತಿಂಗಳು 1 ರಿಂದ 25ನೇ ದಿನಾಂಕದೊಳಗೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಪ್ಪಳ ಯುವನಿಧಿ ಸಹಾಯವಾಣಿ ಸಂಖ್ಯೆ: 1800 599 7154 ನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande