
ಬಳ್ಳಾರಿ, 20 ಜುಲೈ (ಹಿ.ಸ.):
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್-47 ರಲ್ಲಿ ವಿದ್ಯುತ್ ಪರಿವರ್ತಕ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 22 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ನಗರದ ಆಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರ್ ಪೇಟೆ ಸೇರಿದಂತೆ ಇನ್ನೂ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್