ಶಾಶ್ವತ ನಿವಾಸಿ ಪ್ರಮಾಣಪತ್ರ' ವಿತರಣೆಗೆ ಅಶೋಕ ತೀವ್ರ ವಿರೋಧ
ಬೆಂಗಳೂರು, 20 ಜುಲೈ (ಹಿ.ಸ.): ಆ್ಯಂಕರ್:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ''ಮನೆ ಬಾಗಿಲಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ '' ವಿತರಣೆಗೆ ಚಾಲನೆ ನೀಡಿರುವ ಕ್ರಮವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಶ್ವತ ನಿ
Ashok file photo


ಬೆಂಗಳೂರು, 20 ಜುಲೈ (ಹಿ.ಸ.):

ಆ್ಯಂಕರ್:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ಮನೆ ಬಾಗಿಲಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ ' ವಿತರಣೆಗೆ ಚಾಲನೆ ನೀಡಿರುವ ಕ್ರಮವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಪೌರತ್ವ, ವಲಸೆ ಹಾಗೂ ವಿದೇಶಿಯರ ಗುರುತಿಸುವಿಕೆ ಸಂಬಂಧಿತ ವಿಷಯಗಳು ಸಂವಿಧಾನದ ಪ್ರಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಹೀಗಾಗಿ ರಾಜ್ಯ ಸರ್ಕಾರದ ಈ ಕ್ರಮ ಸಂವಿಧಾನಬಾಹಿರವಾಗಿದೆ ಎಂದು ಆರೋಪಿಸಿದರು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಸಂದರ್ಭದಲ್ಲಿ ಇಂತಹ ಪ್ರಮಾಣಪತ್ರಗಳನ್ನು ಮನೆ ಮನೆಗೆ ವಿತರಿಸುವ ಉದ್ದೇಶದ ಬಗ್ಗೆ ಅನುಮಾನಗಳು ಮೂಡುತ್ತಿವೆ. ಅಕ್ರಮ ವಲಸಿಗರು ಹಾಗೂ ನಕಲಿ ದಾಖಲೆಗಳ ದುರುಪಯೋಗಕ್ಕೆ ಅವಕಾಶ ಕಲ್ಪಿಸುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಕಂದಾಯ ಇಲಾಖೆಯ ಮೂಲಕ ಪ್ರಮಾಣಪತ್ರ ವಿತರಣೆಗೆ ಮುಂದಾಗಿರುವುದು ಭ್ರಷ್ಟಾಚಾರ, ನಕಲಿ ದಾಖಲೆಗಳ ಸೃಷ್ಟಿ ಮತ್ತು ಅಧಿಕಾರ ದುರುಪಯೋಗಕ್ಕೆ ಕಾರಣವಾಗಬಹುದು ಎಂದು ಆರೋಪಿಸಿದ ಅಶೋಕ, ಈ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಸರ್ಕಾರ ಹೊರಡಿಸಿರುವ ಪ್ರಸ್ತಾವನೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಂವಿಧಾನದ ಆಶಯಗಳು, ಕನ್ನಡಿಗರ ಹಕ್ಕುಗಳು ಹಾಗೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕ್ರಮದ ವಿರುದ್ಧ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande