
ನವದೆಹಲಿ, 20 ಜುಲೈ (ಹಿ.ಸ.):
ಆ್ಯಂಕರ್:
ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,43,280ರಿಂದ ₹1,43,430ರ ನಡುವೆ, 22 ಕ್ಯಾರೆಟ್ ಚಿನ್ನದ ಬೆಲೆ ₹1,31,290ರಿಂದ ₹1,31,440ರ ನಡುವೆ ವಹಿವಾಟಾಗಿದೆ.
ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ ₹1,43,430 ಹಾಗೂ 22 ಕ್ಯಾರೆಟ್ ಚಿನ್ನ ₹1,31,440ಕ್ಕೆ ಮಾರಾಟವಾಗುತ್ತಿದೆ. ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್ ಮತ್ತು ಭುವನೇಶ್ವರದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ₹1,43,280 ಹಾಗೂ 22 ಕ್ಯಾರೆಟ್ ಚಿನ್ನ ₹1,31,290ರಷ್ಟಿದೆ.
ಅಹಮದಾಬಾದ್, ಭೋಪಾಲ್ ಮತ್ತು ಪಾಟ್ನಾದಲ್ಲಿ 24 ಕ್ಯಾರೆಟ್ ಚಿನ್ನ ₹1,43,330 ಹಾಗೂ 22 ಕ್ಯಾರೆಟ್ ಚಿನ್ನ ₹1,31,340ಕ್ಕೆ ಲಭ್ಯವಿದೆ. ಜಯಪುರ ಮತ್ತು ಲಖನೌದಲ್ಲಿ 24 ಕ್ಯಾರೆಟ್ ಚಿನ್ನ ₹1,43,430 ಹಾಗೂ 22 ಕ್ಯಾರೆಟ್ ಚಿನ್ನ ₹1,31,440ಕ್ಕೆ ವಹಿವಾಟಾಗಿದೆ.
ಬೆಳ್ಳಿಯ ಬೆಲೆಯಲ್ಲೂ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದ್ದು, ದೆಹಲಿ ಮಾರುಕಟ್ಟೆಯಲ್ಲಿ ಪ್ರತಿ ಕಿಲೋಗ್ರಾಂ ಬೆಳ್ಳಿ ₹2,29,900ಕ್ಕೆ ಮಾರಾಟವಾಗುತ್ತಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.