
ಹಾಸನ, 20 ಜುಲೈ (ಹಿ.ಸ.):
ಆ್ಯಂಕರ್:
ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ಅಂತ್ಯಸಂಸ್ಕಾರವು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ವೇಳೆ ಅಂತಿಮ ನಮನ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಷ್ಟ್ರಧ್ವಜವನ್ನು ದೇವೇಗೌಡರು ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿ ಗೌರವ ಸಲ್ಲಿಸಿದರು.
ಚೆನ್ನಮ್ಮ ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ದೇವೇಗೌಡರ ಕುಟುಂಬಕ್ಕೆ ಕರುಣಿಸಲಿ ಎಂದು ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ವಿವಿಧ ಗಣ್ಯರು ಭಾಗವಹಿಸಿ ಅಗಲಿದ ಚೇತನಕ್ಕೆ ನುಡಿನಮನ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII