ವೀಡಿಯೊ ಕಾನ್ಫರೆನ್ಸ್ ಮೂಲಕ ಅಜ್ಜಿಗೆ ಅಂತಿಮ ನಮನ ಸಲ್ಲಿಸಲಿರುವ ಪ್ರಜ್ವಲ್ ರೇವಣ್ಣ
ಬೆಂಗಳೂರು, 20 ಜುಲೈ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ಅಂತ್ಯಸಂಸ್ಕಾರದ ವಿಧಿವಿಧಾನಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ವರ್ಚುವಲ್ ಮೂಲಕ ಸಾಕ್ಷಿಯಾದರು. ಖುದ್ದಾಗಿ ಹಾಜರಾಗಲು ಯಾವುದೇ ಪೆರೋಲ್ ಅರ್ಜಿ ಸಲ್ಲಿಸ
Prajwal Revanna Attends


ಬೆಂಗಳೂರು, 20 ಜುಲೈ (ಹಿ.ಸ.):

ಆ್ಯಂಕರ್:

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡರ ಅಂತ್ಯಸಂಸ್ಕಾರದ ವಿಧಿವಿಧಾನಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ವರ್ಚುವಲ್ ಮೂಲಕ ಸಾಕ್ಷಿಯಾದರು. ಖುದ್ದಾಗಿ ಹಾಜರಾಗಲು ಯಾವುದೇ ಪೆರೋಲ್ ಅರ್ಜಿ ಸಲ್ಲಿಸದ ಅವರು, ಜೈಲು ಅಧಿಕಾರಿಗಳ ವಿಶೇಷ ಅನುಮತಿಯೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಅಜ್ಜಿಯ ಅಂತಿಮ ದರ್ಶನ ಪಡೆದರು.

ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆದ ಅಂತ್ಯಕ್ರಿಯೆಯ ನೇರಪ್ರಸಾರವನ್ನು ಜೈಲಿನ ಪ್ರತ್ಯೇಕ ಸೆಲ್ನಲ್ಲಿ ಕುಳಿತು ಪ್ರಜ್ವಲ್ ವೀಕ್ಷಿಸಿದರು. ಲೈವ್ ಫೀಡ್ ಮೂಲಕ ಅಜ್ಜಿಯ ಪಾರ್ಥಿವ ಶರೀರ ಹಾಗೂ ಕುಟುಂಬಸ್ಥರು ಧಾರ್ಮಿಕ ವಿಧಿಗಳನ್ನು ನೆರವೇರಿಸುವುದನ್ನು ಕಂಡು ಅವರು ಭಾವುಕರಾಗಿ ಕಣ್ಣೀರಾದರು. ಕಾನೂನಿನ ಕಟ್ಟುನಿಟ್ಟಿನ ನಿಯಮಗಳು ಹಾಗೂ ಸಮಾಜದ ಮುಖ್ಯವಾಹಿನಿಯಿಂದ ದೂರವಿರುವ ಈ ಸಂದರ್ಭದಲ್ಲಿ, ಜೈಲಿನಲ್ಲೇ ಕುಳಿತು ಅಜ್ಜಿಗೆ ಅಂತಿಮ ನಮನ ಸಲ್ಲಿಸಬೇಕಾದ ಅನಿವಾರ್ಯತೆ ಒದಗಿಬಂದಿದ್ದು, ಅವರಿಗೆ ತೀವ್ರ ಆಘಾತ ತಂದಿದೆ.

---------------

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande