ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ
ಬೆಂಗಳೂರು, 20 ಜುಲೈ (ಹಿ.ಸ.): ಆ್ಯಂಕರ್: ಜಾತಿ ಮತ್ತು ನಿವಾಸ ಪ್ರಮಾಣಪತ್ರ ಪಡೆಯಲು ಕಚೇರಿಗಳಿಗೆ ಅಲೆಯುವುದಕ್ಕೆ ತೆರೆ ಎಳೆಯುವ ಉದ್ದೇಶದಿಂದ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ವಿಶೇಷ ಅಭಿಯಾನಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡಲಾಗಿದೆ. ರಾಜ್ಯದ ಕೋಟ್ಯಂತರ ನಾಗರಿಕರಿಗೆ ದಲ್ಲಾಳಿಗಳ ಹಾವಳಿ ಹಾಗೂ ಕಚೇರಿ
Doorstep Delivery


ಬೆಂಗಳೂರು, 20 ಜುಲೈ (ಹಿ.ಸ.):

ಆ್ಯಂಕರ್:

ಜಾತಿ ಮತ್ತು ನಿವಾಸ ಪ್ರಮಾಣಪತ್ರ ಪಡೆಯಲು ಕಚೇರಿಗಳಿಗೆ ಅಲೆಯುವುದಕ್ಕೆ ತೆರೆ ಎಳೆಯುವ ಉದ್ದೇಶದಿಂದ ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ವಿಶೇಷ ಅಭಿಯಾನಕ್ಕೆ ವಿಧಾನಸೌಧದಲ್ಲಿ ಚಾಲನೆ ನೀಡಲಾಗಿದೆ. ರಾಜ್ಯದ ಕೋಟ್ಯಂತರ ನಾಗರಿಕರಿಗೆ ದಲ್ಲಾಳಿಗಳ ಹಾವಳಿ ಹಾಗೂ ಕಚೇರಿ ಅಲೆದಾಟ ತಪ್ಪಿಸಲು ಉಚಿತವಾಗಿ ಮನೆ ಬಾಗಿಲಿಗೇ ಪ್ರಮಾಣಪತ್ರ ತಲುಪಿಸುವ ಈ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಒಟ್ಟು 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣಪತ್ರಗಳನ್ನು ಪಿಡಿಎಫ್ ರೂಪದಲ್ಲಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು, ಸ್ಥಳೀಯ ಆಡಳಿತದ ಮೂಲಕ ಇವುಗಳನ್ನು ಉಚಿತವಾಗಿ ಮನೆಗಳಿಗೆ ತಲುಪಿಸಲಾಗುತ್ತದೆ. ಈಗಾಗಲೇ 85 ಲಕ್ಷ ಪ್ರಮಾಣಪತ್ರಗಳನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಲಾಗಿದ್ದು, ವಾಟ್ಸ್ಆಪ್ ಅಥವಾ ಎಸ್ಎಂಎಸ್ ಮೂಲಕ ನೇರ ಲಿಂಕ್ ಬಳಸಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಲ್ಲದೆ, ನಾಡಕಚೇರಿ, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳ ಮೂಲಕವೂ ಸಾರ್ವಜನಿಕರು ಸುಲಭವಾಗಿ ಈ ಸೇವೆ ಪಡೆಯಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande