ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ
ಬೆಂಗಳೂರು, 20 ಜುಲೈ (ಹಿ.ಸ.): ಆ್ಯಂಕರ್:ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿ.ಜಿ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ''ಆಪರೇಷನ್ ರೈಸ್'' ಹಾಗೂ ''ಬೇಡ ಬ್ರೋ'' ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾ
Awareness


ಬೆಂಗಳೂರು, 20 ಜುಲೈ (ಹಿ.ಸ.):

ಆ್ಯಂಕರ್:ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿ.ಜಿ.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

'ಆಪರೇಷನ್ ರೈಸ್' ಹಾಗೂ 'ಬೇಡ ಬ್ರೋ' ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಲಾಯಿತು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳು ಜಾಗೃತಿ ಮೂಡಿಸಿದರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande