
ಬಳ್ಳಾರಿ, 20 ಜುಲೈ (ಹಿ.ಸ.):
ಆ್ಯಂಕರ್ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಸಂಸ್ಥೆಯ ಬಹುಕೌಶಾಲ್ಯಾಭಿವೃದ್ದಿ ಕೇಂದ್ರದ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹತ್ತನೇ ತರಗತಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ತಲಾ 10 ಯುವಕರಿಗೆ ‘ಟೂಲರೂಮ್ ಮಶಿನಿಸ್ಟ್’ ತಾಂತ್ರಿಕ ವೃತ್ತಿ ತರಬೇತಿಗೆ ಉಚಿತ ಪ್ರವೇಶಾತಿ ಪ್ರಾರಂಭವಾಗಿದೆ.
ತರಬೇತಿ ಹೊಂದಿದ ಅಭ್ಯರ್ಥಿಗಳಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಒಂದೇ ಕೋರ್ಸಿನಲ್ಲಿ ಫಿಟ್ಟರ್, ಟರ್ನರ್, ಮಿಲ್ಲರ್, ಸಿಎನ್ಸಿ, ಕ್ಯಾಡ್-ಕ್ಯಾಮ್ ಮತ್ತು ಟೂಲ್ ಆಂಡ್ ಡೈ ಮೇಕಿಂಗ್ ಟ್ರೇಡ್ಗಳಲ್ಲಿ ಆನ್ ದಿ ಜಾಬ್ ತರಬೇತಿ ನೀಡುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶಗಳು ದೊರಕುತ್ತವೆ. ಜೊತೆಗೆ ಅಟೊಕ್ಯಾಡ್, ಕನ್ನಡ ಮತ್ತು ಇಂಗ್ಲಿಷ್ ಭಾಷಾ ಕೌಶಲ್ಯ ಹಾಗೂ ಉದ್ಯೋಗ ಕೌಶಲ್ಯಗಳನ್ನು ಕಲಿಸಲಾಗುತ್ತದೆ.
ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ಶಿಕ್ಷಕರನ್ನು ಹೊಂದಿದೆ. ತರಬೇತಿಯ ನಂತರ ವಿದ್ಯಾರ್ಥಿಗಳಿಗೆ ಟೂಲಿಂಗ್, ವಿಮಾನ ತಯಾರಿಕೆ, ಮತ್ತು ಅಟೊಮೊಬೈಲ್ ವಲಯಗಳ ಕೈಗಾರಿಕೆಗಳಲ್ಲಿ ಉದ್ಯೋಗ ದೊರಕಿಸಿ ಕೊಡಲಾಗುವುದು. ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆಂಟ್ ನ ಐಶ್ವರ್ಯ ಕಾಲೋನಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಐ.ಟಿ.ಐ. ಕ್ಯಾಂಪಸ್) ಅಥವಾ ದೂ.08392-200087, ಮೊ.9620057086, 6361880236, 7795680677 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿಯ ಪ್ರಾಂಶುಪಾಲರು ಮುತ್ತಣ್ಣ ದರ್ಮಂತಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್