ಗಾಂಧಿ ಬಜಾರ್ ರಸ್ತೆ ವ್ಯಾಪಾರಿಗಳಿಗೆ ಪ್ರತ್ಯೇಕ ಜಾಗ ನಿಗದಿ; ಬಿಬಿಎಂಪಿ ಆಯುಕ್ತ ಜಗದೀಶ್ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು, 20 ಜುಲೈ (ಹಿ.ಸ.): ಆ್ಯಂಕರ್: ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ಸಾಂಸ್ಕೃತಿಕ ಮಾರುಕಟ್ಟೆಯಾದ ಗಾಂಧಿ ಬಜಾರ್ನಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಬೀದಿ ಬದಿ ವ್ಯಾಪಾರಿಗಳ ಜೀವನೋಪಯೋಗಿ ಬದುಕಿನ ನಡುವೆ ಸಮತೋಲನ ಕಾಯ್ದುಕೊಳ್ಳಲು ಬಿಬಿಎಂಪಿ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಬಿಎಂಪಿ ಆಯು
Gandhi Bazaar Street


ಬೆಂಗಳೂರು, 20 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯ ರಾಜಧಾನಿ ಬೆಂಗಳೂರಿನ ಐತಿಹಾಸಿಕ ಸಾಂಸ್ಕೃತಿಕ ಮಾರುಕಟ್ಟೆಯಾದ ಗಾಂಧಿ ಬಜಾರ್ನಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಬೀದಿ ಬದಿ ವ್ಯಾಪಾರಿಗಳ ಜೀವನೋಪಯೋಗಿ ಬದುಕಿನ ನಡುವೆ ಸಮತೋಲನ ಕಾಯ್ದುಕೊಳ್ಳಲು ಬಿಬಿಎಂಪಿ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಬಿಎಂಪಿ ಆಯುಕ್ತ ಜಗದೀಶ್ ಜಿ. ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಹೈಕೋರ್ಟ್ ಮಾರ್ಗಸೂಚಿಯಂತೆ ವ್ಯಾಪಾರಿಗಳಿಗೆ ನಿರ್ದಿಷ್ಟ ಜಾಗವನ್ನು ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಗಾಂಧಿ ಬಜಾರ್ನಲ್ಲಿ ಸೌಂದರ್ಯೀಕರಣದ ಬಳಿಕವೂ ವ್ಯಾಪಾರಿಗಳ ದಟ್ಟಣೆಯಿಂದ ಸಾರ್ವಜನಿಕರು ರಸ್ತೆಯಲ್ಲೇ ಸಂಚರಿಸುವಂತಾಗಿದ್ದು ಗಂಭೀರ ಸಮಸ್ಯೆಗೆ ಕಾರಣವಾಗಿತ್ತು. ಇದನ್ನು ಮನಗಂಡು ಹೈಕೋರ್ಟ್ ನಿರ್ದೇಶನದನ್ವಯ ಬಿಬಿಎಂಪಿ ಹೊಸ ನಿಯಂತ್ರಣ ಕ್ರಮ ಜಾರಿಗೊಳಿಸುತ್ತಿದ್ದು, ಇನ್ನು ಮುಂದೆ ವ್ಯಾಪಾರಿಗಳು ಮನಬಂದಂತೆ ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಆಕ್ರಮಿಸಿಕೊಳ್ಳಲು ಅವಕಾಶವಿರುವುದಿಲ್ಲ

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande