
ಬೆಂಗಳೂರು, 20 ಜುಲೈ (ಹಿ.ಸ.):
ಆ್ಯಂಕರ್:
ಕಡಿಮೆ ಸಂಖ್ಯೆಯ ಉನ್ನತ ಶಿಕ್ಷಣ ಸೀಟುಗಳಿಗಾಗಿ ನಡೆಯುತ್ತಿರುವ ತೀವ್ರ ಪೈಪೋಟಿ ಇದೆ. ಹೀಗಾಗಿ ಉದ್ಯೋಗದ ಒತ್ತಡ ಹಾಗೂ ಸತತ ಪರೀಕ್ಷಾ ಅಕ್ರಮಗಳಿಂದ ಯುವಜನರು ಅನುಭವಿಸುತ್ತಿರುವ ಆತಂಕವನ್ನು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಅರ್ಥಮಾಡಿಕೊಳ್ಳಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ಹೋರಾಟದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಯುವಜನರ ಹತಾಶೆಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ಒಪ್ಪಿಕೊಳ್ಳುವುದು ನಮ್ಮ ಮೂಲಭೂತ ಕರ್ತವ್ಯವಾಗಿದೆ ಎಂದಿದ್ದಾರೆ.
ಪರೀಕ್ಷಾ ಅಕ್ರಮಗಳು ಮತ್ತು ಭವಿಷ್ಯದ ಅನಿಶ್ಚಿತತೆಯಿಂದ ಕಂಗಾಲಾಗಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಮನಿಸುವ ಬದಲು, ಅವರ ನೋವಿಗೆ ಸ್ಪಂದಿಸಿ ಸಾಂತ್ವನ ಹೇಳುವ ಮತ್ತು ಪರಿಹಾರ ಒದಗಿಸುವ ವ್ಯವಸ್ಥೆ ರೂಪುಗೊಳ್ಳಬೇಕು ಎಂದಿದ್ದಾರೆ. ಇನ್ನು ಈ ಮೂಲಕ ಯುವ ಸಮುದಾಯದ ಧ್ವನಿಗೆ ಬೆಂಬಲ ಸೂಚಿಸಿದ್ದು, ಆಡಳಿತದಲ್ಲಿ ಸಂವೇದನಾಶೀಲತೆಯ ಅಗತ್ಯತೆಯನ್ನು ಒತ್ತಿಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII