ಎಂಎಸ್ಐಎಲ್ ಸಂಸ್ಥೆಯ 62 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಲು ಸಚಿವ ಎಂ.ಬಿ. ಪಾಟೀಲ್ ಸೂಚನೆ
ಬೆಂಗಳೂರು, 20 ಜುಲೈ (ಹಿ.ಸ.): ಆ್ಯಂಕರ್: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ದರ್ಜೆಯ 62 ಹುದ್ದೆಗಳ ನೇಮಕಾತಿಯನ್ನು ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕಟ್ಟುನಿಟ್ಟಿ
MB Patil


ಬೆಂಗಳೂರು, 20 ಜುಲೈ (ಹಿ.ಸ.):

ಆ್ಯಂಕರ್:

ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ದರ್ಜೆಯ 62 ಹುದ್ದೆಗಳ ನೇಮಕಾತಿಯನ್ನು ವಿಳಂಬವಿಲ್ಲದೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ವಿಕಾಸಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧೀಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧಪಡಿಸಿರುವ ಮೆರಿಟ್ ಪಟ್ಟಿಯ ಆಧಾರದ ಮೇಲೆಯೇ ಸಹಾಯಕ ಮತ್ತು ಮಾರಾಟ ವ್ಯವಸ್ಥಾಪಕ ಸೇರಿದಂತೆ ಎಲ್ಲಾ ಹುದ್ದೆಗಳನ್ನು ಸಂಪೂರ್ಣ ಪಾರದರ್ಶಕವಾಗಿ ಭರ್ತಿ ಮಾಡಬೇಕು. ಬಾಹ್ಯ ಒತ್ತಡಗಳಿಗೆ ಮಣಿಯದೆ ಅರ್ಹತೆಗೆ ಮಾತ್ರ ಆದ್ಯತೆ ನೀಡಬೇಕು ಎಂದಿರುವ ಸಚಿವರು, ಮೊದಲ ಅಭ್ಯರ್ಥಿ ಹಾಜರಾಗದಿದ್ದರೆ ಕಾಯ್ದಿರಿಸಿದ ಪಟ್ಟಿಯ ಮುಂದಿನವರಿಗೆ ತಕ್ಷಣ ಅವಕಾಶ ಕಲ್ಪಿಸುವಂತೆ ಸ್ಪಷ್ಟಪಡಿಸಿದ್ದಾರೆ. ಇನ್ನು ನೇಮಕಾತಿಯಲ್ಲಿ ಅಕ್ರಮ ಕಂಡುಬಂದರೆ ಸಹಿಸಲ್ಲಾ , ಅಕ್ರಮದಲ್ಲಿ ಭಾಗಿ ಆದವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande