
ಕೊಪ್ಪಳ , 20 ಜುಲೈ (ಹಿ.ಸ.):
ಆ್ಯಂಕರ್ :ಕೊಪ್ಪಳ ಜಿಲ್ಲೆಯ ಪೋಷಕರು ಹಾಗೂ ವಿದ್ಯಾರ್ಥಿಗಳ ಗಮನಕ್ಕೆ ತಿಳಿಯಪಡಿಸುವುದೇನೆಂದರೆ, 6ನೇ ತರಗತಿ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (ಜೆ.ಎನ್.ವಿ.ಎಸ್.ಟಿ)–2027ರ ಆನ್ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸಲು ಇದೇ ಜುಲೈ 31 ಕೊನೆಯ ದಿನಾಂಕವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು www.navodaya.gov.in ಹಾಗೂ https://cbseitms.rcil.gov.in/nvs/ ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 6ನೇ ತರಗತಿ ಜೆ.ಎನ್.ವಿ.ಎಸ್.ಟಿ–2027ರ ಆಯ್ಕೆ ಪರೀಕ್ಷೆಯನ್ನು 2026ರ ನವೆಂಬರ್ 28ರಂದು ನಡೆಸಲು ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು, ಈ ಸಂಬಂಧ ಅಧಿಸೂಚನೆ ಪ್ರಕಟಿಸಲಾಗಿದೆ.
ಜವಾಹರ್ ನವೋದಯ ವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದ್ದು, ಅತ್ಯಾಧುನಿಕ ಶೈಕ್ಷಣಿಕ ಹಾಗೂ ವಸತಿ ಸೌಲಭ್ಯಗಳನ್ನು ಹೊಂದಿವೆ. ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (ಜೆ.ಎನ್.ವಿ.ಎಸ್.ಟಿ–2027) ಗೆ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್