
ಬಳ್ಳಾರಿ, 20 ಜುಲೈ (ಹಿ.ಸ.):
ಆ್ಯಂಕರ್ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಳ್ಳಾರಿ ಜಿಲ್ಲಾ ಕಚೇರಿಯ ವತಿಯಿಂದ ಜಾರಿಗೆ ತರಲಾಗುತ್ತಿರುವ ‘ಭೂ ಒಡೆತನ ಯೋಜನೆ'ಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ನಿಗಮವು ಉದ್ದೇಶಿಸಿದೆ. ಇದಕ್ಕಾಗಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಹಾಗೂ ಸಿರುಗುಪ್ಪ ಹೋಬಳಿಯ ಸಿರಿಗೇರಿ ಮತ್ತು ರಾರಾವಿ ಗ್ರಾಮಗಳ ಒಟ್ಟು 15 ಭೂ ಮಾಲೀಕರು ತಮ್ಮ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಲು ಸ್ವಇಚ್ಛೆಯಿಂದ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.
ಆಕ್ಷೇಪಣೆ ಸಲ್ಲಿಕೆಗೆ ಆಗಸ್ಟ್ 1 ಕೊನೆ ದಿನ: ಪ್ರಸ್ತಾವನೆ ಸಲ್ಲಿಕೆಯಾಗಿರುವ ಜಮೀನುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಥವಾ ಇತರ ಯಾವುದೇ ವ್ಯಕ್ತಿಗಳಿಂದ ಏನಾದರೂ ಕಾನೂನುಬದ್ಧ ಆಕ್ಷೇಪಣೆಗಳಿದ್ದಲ್ಲಿ, ಅವರು ಸೂಕ್ತ ದಾಖಲೆಗಳೊಂದಿಗೆ ತಮ್ಮ ಲಿಖಿತ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆಗಳನ್ನು ಆಗಸ್ಟ್ 01 ರ ಒಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ಅವಧಿಯಲ್ಲಿ ಖುದ್ದಾಗಿ ಸಲ್ಲಿಸಲು ಕೋರಲಾಗಿದೆ. ನಿಗದಿತ ಅವಧಿಯ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ವಿಳಾಸ: ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮನೆ ನಂ.37/10, ನಂದಿ ಶಾಲೆ ಹಿಂಭಾಗ, 1ನೇ ತಿರುವು, ನಂದಿ ಕಾಲೋನಿ, ಕಂಟೋನ್ಮೆಟ್, ಬಳ್ಳಾರಿ – 583104. ದೂ. 08392-245551 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್