ಕೊಪ್ಪಳ ವಿಶ್ವವಿದ್ಯಾಲಯ: ವಿವಿಧ ಕೋರ್ಸುಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ, 20 ಜುಲೈ (ಹಿ.ಸ.): ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ. ಮಹಾವಿದ್ಯಾಲಯಗಳಲ್ಲಿ ವಿವಿಧ ಕೋರ್ಸುಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್
ಕೊಪ್ಪಳ ವಿಶ್ವವಿದ್ಯಾಲಯ: ವಿವಿಧ ಕೋರ್ಸುಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ


ಕೊಪ್ಪಳ, 20 ಜುಲೈ (ಹಿ.ಸ.):

ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ. ಮಹಾವಿದ್ಯಾಲಯಗಳಲ್ಲಿ ವಿವಿಧ ಕೋರ್ಸುಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪ್ರದರ್ಶನ ಕಲೆ, ಮಹಿಳಾ ಅಧ್ಯಯನ ವಿಭಾಗ, ಪತ್ರಿಕೋದ್ಯಮ, ಎಂ.ಕಾಂ., ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಭೂಗೋಳಶಾಸ್ತ್ರ, ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ಕೋರ್ಸುಗಳಿಗೆ ಪ್ರವೇಶ ಬಯಸುವ ಆಸಕ್ತ ಅರ್ಹ ವಿದ್ಯಾರ್ಥಿಗಳು https://uucms.karnataka.gov.in/ ತಂತ್ರಾಂಶದ ಮೂಲಕ ಮೂಲಕ ಆಗಸ್ಟ್ 26 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, 4ನೇ ಮಹಡಿ, ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ ತಳಕಲ್, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande