ರಾಯಚೂರು: ನಾಳೆ ಕನ್ನಡ ಜಾಗೃತಿ ಸಮಿತಿ ಸದಸ್ಯರ ನೇಮಕ ಕುರಿತು ಪೂರ್ವಭಾವಿ ಸಭೆ
ರಾಯಚೂರು, 20 ಜುಲೈ (ಹಿ.ಸ.): ಆ್ಯಂಕರ್ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ರಚಿಸಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ಸರ್ಕಾರದ ಆದೇಶಾನುಸಾರ ನೇಮಕ ಮಾಡಲು ಜುಲೈ 21ರ ಬೆಳಿಗ್ಗೆ 11.30ಕ್ಕೆ ನಗರದ ನೂತನ ಜ
ರಾಯಚೂರು: ನಾಳೆ ಕನ್ನಡ ಜಾಗೃತಿ ಸಮಿತಿ ಸದಸ್ಯರ ನೇಮಕ ಕುರಿತು ಪೂರ್ವಭಾವಿ ಸಭೆ


ರಾಯಚೂರು, 20 ಜುಲೈ (ಹಿ.ಸ.):

ಆ್ಯಂಕರ್ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದಲ್ಲಿ ರಚಿಸಿರುವ ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ಸರ್ಕಾರದ ಆದೇಶಾನುಸಾರ ನೇಮಕ ಮಾಡಲು ಜುಲೈ 21ರ ಬೆಳಿಗ್ಗೆ 11.30ಕ್ಕೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಸರ್ಕಾರದ ಆದೇಶದಲ್ಲಿ ಕನ್ನಡ ಜಾಗೃತಿ ಸಮಿತಿ ಸದಸ್ಯರ ಕಾರ್ಯವ್ಯಾಪ್ತಿಯ ಕುರಿತಂತೆ ವಿವರಿಸಲಾಗಿದ್ದು, ಇದರನುಸಾರವಾಗಿ ಕನ್ನಡ ಪರ ಕಾರ್ಯಕ್ರಮಗಳು ಮತ್ತು ಇತರೆ ಸಭೆಗಳನ್ನು ಅತಂತ್ಯ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜನೆ ಮಾಡಲಾಗಿದ್ದು, ಸಂಬಂಧಿಸಿದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande