
ರಾಯಚೂರು, 20 ಜುಲೈ (ಹಿ.ಸ.):
ಆ್ಯಂಕರ್ : ರಾಯಚೂರು ಜಿಲ್ಲಾಡಳಿತದ ವತಿಯಿಂದ ಜುಲೈ 29ರಂದು ಶ್ರೀ ಹಡಪದ ಅಪ್ಪಣ್ಣ ಅವರ ಜಯಂತಿ ನಡೆಯಲಿವೆ.
ಈ ಜಯಂತಿ ಅಂಗವಾಗಿ ಜುಲೈ 21ರ ಬೆಳಿಗ್ಗೆ 11ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ಸಮಾಜದ ಮುಖಂಡರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್