ಬಿಜೆಪಿ ರಾಜ್ಯ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜು ನಾಯ್ಕರ್ ಆಯ್ಕೆ
ಬಾಗಲಕೋಟೆ, 20 ಜುಲೈ (ಹಿ.ಸ.) ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಜ್ಯ ಎಸ್.ಟಿ. ಮೋರ್ಚಾದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬಾಗಲಕೋಟೆಯರಾಜು ನಾಯ್ಕರ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ. ಕಳೆದ ಏಳು ವರ್ಷ
ಹೆಚ್ಚು


ಬಾಗಲಕೋಟೆ, 20 ಜುಲೈ (ಹಿ.ಸ.)

ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಜ್ಯ ಎಸ್.ಟಿ. ಮೋರ್ಚಾದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬಾಗಲಕೋಟೆಯರಾಜು ನಾಯ್ಕರ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಕಳೆದ ಏಳು ವರ್ಷಗಳಿಂದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಂಘಟನೆಯ ಬಲವರ್ಧನೆಗೆ ಶ್ರಮಿಸಿದ ರಾಜು ನಾಯ್ಕರ್ ಅವರು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತಮ್ಮ ಸಮರ್ಪಣೆ, ನಾಯಕತ್ವ ಹಾಗೂ ಕಾರ್ಯಕ್ಷಮತೆಯಿಂದ ಗಮನ ಸೆಳೆದಿದ್ದರು. ಅವರ ಸೇವೆಯನ್ನು ಪರಿಗಣಿಸಿ ಪಕ್ಷದ ರಾಜ್ಯ ನಾಯಕತ್ವವು ಇದೀಗ ರಾಜ್ಯ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂಬ ಮಹತ್ವದ ಜವಾಬ್ದಾರಿಯನ್ನು ನೀಡಿದೆ.

ಈ ನೇಮಕಾತಿ ಪಕ್ಷದ ಸಂಘಟನೆಯಲ್ಲಿ ಅವರ ದೀರ್ಘಕಾಲದ ಪರಿಶ್ರಮಕ್ಕೆ ದೊರೆತ ಗೌರವವಾಗಿದೆ ಎಂದು ಬಿಜೆಪಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ರಾಜ್ಯಾದ್ಯಂತ ಎಸ್.ಟಿ. ಸಮುದಾಯವನ್ನು ಇನ್ನಷ್ಟು ಸಂಘಟಿಸಿ, ಪಕ್ಷದ ತಳಮಟ್ಟದ ಕಾರ್ಯಕರ್ತರಿಗೆ ಹೊಸ ಚೈತನ್ಯ ತುಂಬಲಿದ್ದಾರೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ರಾಜು ನಾಯ್ಕರ್ ಅವರಿಗೆ ಶುಭಾಶಯ ಕೋರಿದ ಮುಖಂಡರು, ತಮ್ಮ ಹೊಸ ಜವಾಬ್ದಾರಿಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸಿ, ಪಕ್ಷದ ಸಂಘಟನೆಗೆ ಇನ್ನಷ್ಟು ಬಲ ತುಂಬುವಂತಾಗಲಿ. ಕೂಡಲಸಂಗಮೇಶ್ವರರ ಕೃಪೆಯಿಂದ ಉತ್ತಮ ಸೇವೆ ಸಲ್ಲಿಸುವ ಶಕ್ತಿ ದೊರೆಯಲಿ ಎಂದು ಹಾರೈಸಿದ್ದಾರೆ.

ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳ ಮೂಲಕವೂ ರಾಜು ನಾಯ್ಕರ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದು, ಅವರ ಮುಂದಿನ ರಾಜಕೀಯ ಪಯಣ ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande