ವಿಜಯಪುರ: ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ; ಮುಖಂಡರಿಂದ ಸಮಸ್ಯೆಗಳ ಆಲಿಕೆ
ವಿಜಯಪುರ, 20 ಜುಲೈ (ಹಿ.ಸ.) ಆ್ಯಂಕರ್ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ವಿಶೇಷ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಆಯೋಜಿಸಲಾಯಿತು. ಸಭೆಯಲ್ಲಿ ಪೊ
ಪೊಲೀಸರು


ವಿಜಯಪುರ, 20 ಜುಲೈ (ಹಿ.ಸ.)

ಆ್ಯಂಕರ್ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯಗಳ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ಉದ್ದೇಶದಿಂದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ವಿಶೇಷ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಆಯೋಜಿಸಲಾಯಿತು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ವಿವಿಧ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ಮುಖಂಡರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅವರ ಸಮಸ್ಯೆಗಳು, ಕುಂದುಕೊರತೆಗಳು ಹಾಗೂ ಸಲಹೆಗಳನ್ನು ಆಲಿಸಿದರು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದ್ದು, ಯಾವುದೇ ರೀತಿಯ ಜಾತಿ ದೌರ್ಜನ್ಯ, ತಾರತಮ್ಯ, ಕಿರುಕುಳ ಅಥವಾ ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.

ಸಭೆಯಲ್ಲಿ ಭಾಗವಹಿಸಿದ ಮುಖಂಡರು ತಮ್ಮ ಪ್ರದೇಶಗಳಲ್ಲಿನ ವಿವಿಧ ಸಮಸ್ಯೆಗಳು, ಸಾರ್ವಜನಿಕ ಸುರಕ್ಷತೆ, ಮಹಿಳೆಯರು ಮತ್ತು ಯುವಕರ ಭದ್ರತೆ, ಕಾನೂನು ಸುವ್ಯವಸ್ಥೆ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಸಂಬಂಧಿಸಿದ ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ದಾಖಲಿಸಿಕೊಂಡು ಕಾನೂನು ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಪೊಲೀಸ್ ಇಲಾಖೆ ಜನಸ್ನೇಹಿ ಕಾರ್ಯವೈಖರಿಯನ್ನು ಅನುಸರಿಸುತ್ತಿದ್ದು, ಸಮಾಜದ ಎಲ್ಲ ವರ್ಗದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಅಹವಾಲುಗಳಿಗೆ ಸ್ಪಂದಿಸುವ ಕಾರ್ಯವನ್ನು ಮುಂದುವರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದರು. ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರಕ್ಷಣೆಗೆ ಜಾರಿಯಲ್ಲಿರುವ ವಿವಿಧ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬರೂ ಕಾನೂನಿನ ಮೇಲೆ ವಿಶ್ವಾಸ ಇಟ್ಟು ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕುವಂತೆ ಕರೆ ನೀಡಲಾಯಿತು.

ಸಭೆಯು ಪರಸ್ಪರ ವಿಶ್ವಾಸ, ಸಹಕಾರ ಹಾಗೂ ಪೊಲೀಸ್–ಸಾರ್ವಜನಿಕರ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande