ಪರಿಸರ ಸಂರಕ್ಷಣೆಗೆ ಕೈಜೋಡಿಸಿದ ದರಬಾರ ಹೈಸ್ಕೂಲ್ ಗೆಳೆಯರ ಬಳಗ: ಜಿಲ್ಲಾ ರೈಫಲ್ ಅಸೋಸಿಯೇಷನ್ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ
ವಿಜಯಪುರ, 20 ಜುಲೈ (ಹಿ.ಸ.) ಆ್ಯಂಕರ : ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ನನ್ನ ಗಿಡ ನನ್ನ ಭೂಮಿ ಸಂಘಟನೆಯ ಸಹಯೋಗದಲ್ಲಿ ವಿಜಯಪುರ ನಗರದ ಜಿಲ್ಲಾ ರೈಫಲ್ ಅಸೋಸಿಯೇಷನ್ ಆವರಣದಲ್ಲಿ ದರಬಾರ ಹೈಸ್ಕೂಲ್ ಗೆಳೆಯರ ಬಳಗದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯ
ಪರಿಸರ


ವಿಜಯಪುರ, 20 ಜುಲೈ (ಹಿ.ಸ.)

ಆ್ಯಂಕರ : ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ನನ್ನ ಗಿಡ ನನ್ನ ಭೂಮಿ ಸಂಘಟನೆಯ ಸಹಯೋಗದಲ್ಲಿ ವಿಜಯಪುರ ನಗರದ ಜಿಲ್ಲಾ ರೈಫಲ್ ಅಸೋಸಿಯೇಷನ್ ಆವರಣದಲ್ಲಿ ದರಬಾರ ಹೈಸ್ಕೂಲ್ ಗೆಳೆಯರ ಬಳಗದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಪರಿಸರ ಕಾಳಜಿ ಹೊಂದಿರುವ ಸಮಾಜಸೇವಕ ಉಮೇಶ್ ಕಾರಜೋಳ ಭಾಗವಹಿಸಿ ವಿವಿಧ ಜಾತಿಯ ನೆರಳು ಹಾಗೂ ಫಲವೃಕ್ಷಗಳ ಸಸಿಗಳನ್ನು ನೆಟ್ಟು, ಅವುಗಳನ್ನು ಸಂರಕ್ಷಿಸುವ ಸಂಕಲ್ಪ ಕೈಗೊಂಡರು. ಕೇವಲ ಸಸಿ ನೆಡುವುದಷ್ಟೇ ಅಲ್ಲ, ಅವುಗಳನ್ನು ಮರಗಳಾಗಿ ಬೆಳೆಸುವ ಜವಾಬ್ದಾರಿಯೂ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಮಾಲಿನ್ಯ, ಹವಾಮಾನ ವೈಪರೀತ್ಯ ಹಾಗೂ ಉಷ್ಣಾಂಶ ಏರಿಕೆಯನ್ನು ತಡೆಯಲು ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಅದನ್ನು ಪೋಷಿಸಬೇಕು ಎಂದು ಕರೆ ನೀಡಿದರು.

ಹಸಿರು ಪರಿಸರ ನಿರ್ಮಾಣದಲ್ಲಿ ಯುವಜನರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಿದರೆ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡಲು ಸಾಧ್ಯವಾಗುತ್ತದೆ ಎಂದರು.

ನನ್ನ ಗಿಡ ನನ್ನ ಭೂಮಿ ಸಂಘಟನೆಯ ಸದಸ್ಯರು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿವರಿಸಿ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವೃಕ್ಷಾರೋಪಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ದರಬಾರ ಹೈಸ್ಕೂಲ್ ಗೆಳೆಯರ ಬಳಗದ ಸದಸ್ಯರು, ಪರಿಸರ ಪ್ರೇಮಿಗಳು, ಸಮಾಜಸೇವಕರು ಹಾಗೂ ಜಿಲ್ಲಾ ರೈಫಲ್ ಅಸೋಸಿಯೇಷನ್ನ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಸಿ ನೆಟ್ಟು ಅವುಗಳ ಆರೈಕೆಯ ಪ್ರತಿಜ್ಞೆ ಸ್ವೀಕರಿಸಿದರು.

ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುರಕ್ಷಿತವಾಗಿರುತ್ತದೆ ಎಂಬ ಸಂದೇಶ ಸಾರಿದ ಈ ಕಾರ್ಯಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande