ಸೋನಮ್ ವಾಗ್ಚುಂಗ್ ಸತ್ಯಾಗ್ರಹಕ್ಕೆ ವಾಟಾಳ್ ನಾಗರಾಜ್ ಬೆಂಬಲ
ರಾಮನಗರ, 20 ಜುಲೈ (ಹಿ.ಸ.): ಆ್ಯಂಕರ್: ದೇಶದಲ್ಲಿ ಯುವ ಜನಾಂಗವು ಅಪಾಯದಲ್ಲಿದ್ದು, ನೀಟ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಸಮರ್ಪಕವಾಗಿ ನಡೆಸಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರಾಣಹಾನಿಯಾಗ
Vatal Nagaraj


ರಾಮನಗರ, 20 ಜುಲೈ (ಹಿ.ಸ.):

ಆ್ಯಂಕರ್:

ದೇಶದಲ್ಲಿ ಯುವ ಜನಾಂಗವು ಅಪಾಯದಲ್ಲಿದ್ದು, ನೀಟ್ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಸಮರ್ಪಕವಾಗಿ ನಡೆಸಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳಿಗೆ ಪ್ರಾಣಹಾನಿಯಾಗಿದ್ದು, ಇದರ ವಿರುದ್ಧ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಗ್ಚುಂಗ್ ಅವರ ಬಂಧನ ಖಂಡನೀಯ ಎಂದರು.

ರಾಮನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಕನ್ನಡ ವಾಟಾಳ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಈಡುಗಾಯಿ ಹೊಡೆದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಈ ವೇಳಯಲ್ಲಿ ಮಾತನಾಡಿದ ಅವರು, ಈ ಸತ್ಯಾಗ್ರಹವನ್ನು ಹತ್ತಿಕ್ಕುವ ಕೆಲಸವಾಗುತ್ತಿದ್ದು, ಇದು ದರೋಡೆ ಹಾಗೂ ಕೊಲೆಗಿಂತಲೂ ಅಪಾಯಕಾರಿಯಾಗಿದೆ ಎಂದು ತಿಳಿಸಿದರು. ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಅವರು, ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande