ಶಿವಾಜಿನಗರದಲ್ಲಿ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಸರ್ಕಾರದ ಮೌನವೇಕೆ ಎಂದು ಆರ್. ಅಶೋಕ್ ತರಾಟೆ
ಬೆಂಗಳೂರು, 21 ಜುಲೈ (ಹಿ.ಸ.): ಆ್ಯಂಕರ್: ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ತೆರಳಿದ್ದ ಜಿಬಿಎ ಅಧಿಕಾರಿಯ ಮೇಲಿನ ಮಾರಣಾಂತಿಕ ಹಲ್ಲೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಆಕ್ರೋಶ ವ್
Shivajinagar


ಬೆಂಗಳೂರು, 21 ಜುಲೈ (ಹಿ.ಸ.):

ಆ್ಯಂಕರ್:

ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ತೆರಳಿದ್ದ ಜಿಬಿಎ ಅಧಿಕಾರಿಯ ಮೇಲಿನ ಮಾರಣಾಂತಿಕ ಹಲ್ಲೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸರಣಿ ಪೋಸ್ಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, ಬೇರೆ ಕಡೆ ಕ್ಯಾಮೆರಾ ಮುಂದೆ ರೀಲ್ಸ್ ಮಾಡುವ ಸಚಿವ ಕೃಷ್ಣ ಬೈರೇಗೌಡ ಅವರೇ, ಅಧಿಕಾರಿಗಳ ಮೇಲೆ ಹಲ್ಲೆ ನಡೆದಾಗ ನಿಮ್ಮ ಮೌನೇಕೆ? ಇಲ್ಲಿ ಓಟ್ ಬ್ಯಾಂಕ್ ರಾಜಕೀಯವೇ ಕಾನೂನಿಗಿಂತ ದೊಡ್ಡದಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಅಶೋಕ್, ಕೆಲವು ಪ್ರದೇಶಗಳಿಗೆ ಮಾತ್ರ ಕಾನೂನು ಅನ್ವಯಿಸುವುದಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಎರಡು ರೀತಿಯ ಕಾನೂನು ಜಾರಿಯಲ್ಲಿದೆಯೇ ಎಂದು ಪ್ರಶ್ನಿಸಿರುವ ಅವರು, ಕೂಡಲೇ ದೋಷಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande